ADVERTISEMENT

ನಿಪ್ಪಾಣಿ: ‘ಅಂಬೇಡ್ಕರ್ ಜೀವನಗಾಥೆ ಎಲ್ಲರಿಗೂ ಸ್ಫೂರ್ತಿ’

​ಪ್ರಜಾವಾಣಿ ವಾರ್ತೆ
Published 14 ಏಪ್ರಿಲ್ 2022, 14:32 IST
Last Updated 14 ಏಪ್ರಿಲ್ 2022, 14:32 IST
ನಿಪ್ಪಾಣಿಯಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ ಅಂಗವಾಗಿ ಪ್ರತಿಮೆಗೆ ಸಚಿವೆ ಶಶಿಕಲಾ ಜೊಲ್ಲೆ ಹಾಗೂ ಸಂಸದ ಅಣ್ಣಾಸಾಹೇಬ ಜೊಲ್ಲೆ ಗುರುವಾರ ಮಾಲಾರ್ಪಣೆ ಮಾಡಿದರು
ನಿಪ್ಪಾಣಿಯಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ ಅಂಗವಾಗಿ ಪ್ರತಿಮೆಗೆ ಸಚಿವೆ ಶಶಿಕಲಾ ಜೊಲ್ಲೆ ಹಾಗೂ ಸಂಸದ ಅಣ್ಣಾಸಾಹೇಬ ಜೊಲ್ಲೆ ಗುರುವಾರ ಮಾಲಾರ್ಪಣೆ ಮಾಡಿದರು   

ನಿಪ್ಪಾಣಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ 131ನೇ ಜಯಂತಿ ಅಂಗವಾಗಿ ನಗರದಲ್ಲಿನ ಪ್ರತಿಮೆಗೆ ಮುಜರಾಯಿ, ಹಜ್ ಮತ್ತು ವಕ್ಫ್‌ ಸಚಿವೆ ಶಶಿಕಲಾ ಜೊಲ್ಲೆ ಹಾಗೂ ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಅವರು ಗುರುವಾರ ಮಾಲಾರ್ಪಣೆ ಮಾಡಿದರು.

ಬಳಿಕ ಮಾತನಾಡಿದ ಸಚಿವೆ, ‘ಸಮಾಜದಲ್ಲಿ ಸ್ವಾತಂತ್ರ‍್ಯ, ಸಮಾನತೆ, ಸಹೋದರತ್ವ ಕಲಿಸುವ ಧರ್ಮವೆ ನಿಜವಾದ ಧರ್ಮ ಎಂಬುದನ್ನು ಸಾರಿದ ಮಹಾ ನಾಯಕನ ಹೋರಾಟದ ಹಾದಿ, ಜೀವನಗಾಥೆ ಎಲ್ಲರಿಗೂ ಸ್ಫೂರ್ತಿಯಾಗಿದೆ’ ಎಂದು ಹೇಳಿದರು.

ನಗರಸಭೆ ಅಧ್ಯಕ್ಷ ಜಯವಂತ ಭಾಟಲೆ, ಉಪಾಧ್ಯಕ್ಷೆ ನೀತಾ ಬಾಗಡೆ, ಸ್ಥಾಯಿ ಸಮಿತಿ ಅಧ್ಯಕ್ಷ ರಾಜೇಂದ್ರ ಗುಂದೇಶಾ, ಸದಸ್ಯರು, ಗಣ್ಯರು ಹಾಗೂ ನಾಗರಿಕರು ಉಪಸ್ಥಿತರಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.