ADVERTISEMENT

ಧಾರವಾಡ ಯುವತಿಯ ಹೃದಯ ಬೆಳಗಾವಿ ಯುವಕನಿಗೆ ಕಸಿ ಮಾಡಲು ಸಿದ್ಧತೆ 

​ಪ್ರಜಾವಾಣಿ ವಾರ್ತೆ
Published 11 ಜುಲೈ 2022, 9:19 IST
Last Updated 11 ಜುಲೈ 2022, 9:19 IST
   

ಬೆಳಗಾವಿ: ಮಿದುಳು ನಿಷ್ಕ್ರಿಯವಾದ ಯುವತಿಯೊಬ್ಬರ ಹೃದಯವನ್ನು ಧಾರವಾಡದಿಂದ ಬೆಳಗಾವಿಗೆ ಝೀರೊ ಟ್ರಾಫಿಕ್ ನಲ್ಲಿ ಸಾಗಿಸಲು ಕ್ಷಿಪ್ರ ಸಿದ್ಧತೆ ನಡೆಸಲಾಲಾಗಿದೆ. ಸೋಮವಾರ ಸಂಜೆ 4ಕ್ಕೆ ಈ ಹೃದಯ ತರಲಾಗುತ್ತಿದೆ.

ಅಪಘಾತದಿಂದ ಗಾಯಗೊಂಡ ಯುವತಿಯೊಬ್ಬರು ಧಾರವಾಡ ಎಸ್.ಡಿ.ಎಂ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಅವರ ಮಿದುಳು ನಿಷ್ಕ್ರಿಯವಾಗಿದ್ದು, ಹೃದಯ ಬಡಿದುಕೊಳ್ಳುತ್ತಿದೆ.

ಇದೇ ಕಾಲಕ್ಕೆ ಹೃದ್ರೋಗದಿಂದ ಬಳಲುತ್ತಿರುವ ಯುವಕ ಬೆಳಗಾವಿಯ ಕೆಎಲ್‌ಇಎಸ್‌ಆಸ್ಪತ್ರೆಯಲ್ಲಿ ದಾಖಲಾಗಿದ್ದಾನೆ. ಯುವಕನಿಗೆ ಹೃದಯ ಕಸಿ ಮಾಡಬೇಕಾಗಿದೆ. ಹೀಗಾಗಿ, ಧಾರವಾಡದ ಯುವತಿಯ ಹೃದಯವನ್ನೇ ಬೆಳಗಾವಿಯ ಯುವಕನಿಗೆ ಕಸಿ ಮಾಡಲು ಯುವತಿ ಪಾಲಕರು ಸಮ್ಮತಿಸಿದ್ದಾರೆ.

ADVERTISEMENT

ಹೀಗಾಗಿ ಧಾರವಾಡ- ಬೆಳಗಾವಿ ಮಧ್ಯೆ ಝೀರೊ ಟ್ರಾಫಿಕ್ ಮೂಲಕ ಹೃದಯವನ್ನು ತರಲು ಸಿದ್ಧತೆ ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಂಜೀವ ಪಾಟೀಲ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.