ಗೋಕಾಕ: ಸ್ಪರ್ಧಾತ್ಮಕ ಯುಗದಲ್ಲಿ ಸತತ ಪರಿಶ್ರಮ ಇದ್ದರೆ ಮಾತ್ರ ಉಜ್ವಲ ಭವಿಷ್ಯ ನಿರ್ಮಾಣ ಸಾಧ್ಯ ಎಂದು ಸ್ಪರ್ಧಾತ್ಮಕ ಪರೀಕ್ಷೆ ತರಬೇತುದಾರ ಶರಣಯ್ಯ ಭಂಡಾರಿಮಠ ಹೇಳಿದರು.
ಮಂಗಳವಾರ ಇಲ್ಲಿನ ಗೋಕಾಕ ಶಿಕ್ಷಣ ಸಂಸ್ಥೆಯ ಜೆ.ಎಸ್.ಎಸ್. ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳು ಎಂಬ ವಿಷಯ ಕುರಿತು ನಡೆದ ಒಂದು ದಿನದ ರಾಜ್ಯಮಟ್ಟದ ತರಬೇತಿ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಂಡು ಉಪನ್ಯಾಸ ನೀಡಿದರು.
ಇನ್ನೋರ್ವ ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಂಡಿದ್ದ ಗೋಕಾಕ ತಹಶೀಲ್ದಾರ ಡಾ. ಮೋಹನ ಭಸ್ಮೆ ಅವರು ಮಾತನಾಡಿ, ಪದವಿ ಹಂತದಿಂದಲೇ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ನಡೆಯುತ್ತಿರುವ ಎಲ್ಲಾ ಪರೀಕ್ಷೆಗಳ ಬಗ್ಗೆ ಮಾಹಿತಿ ಹಾಗೂ ನಿರಂತರ ಅಧ್ಯಯನ ಇದ್ದಾಗ ಮಾತ್ರ ತಮ್ಮ ಗುರಿ ಸಾಧಿಸಲು ಸಾಧ್ಯ ಎಂದು ಹೇಳಿದರು.
ಕಾರ್ಯಾಗಾರದಲ್ಲಿ ರಾಜ್ಯದ ವಿವಿಧ ಮಹಾವಿದ್ಯಾಲಯಗಳಿಂದ ಸುಮಾರು 400ಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ವೇದಿಕೆಯಲ್ಲಿ ಅಧ್ಯಕ್ಷತೆ ವಹಿಸಿದ್ದ ಗೋಕಾಕ ಶಿಕ್ಷಣ ಸಂಸ್ಥೆಯ ಚೇರಮನ್ ವಿಶ್ವನಾಥ ಕಡಕೋಳ, ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಸಂಸ್ಥೆಯ ನಿರ್ದೇಶಕರು ಹಾಗೂ ಹಳೆಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ ಚುನಮರಿ ಇದ್ದರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ನಿರ್ದೇಶಕ ಮಹಾಂತೇಶ ತಾಂವಶಿ, ಕಾರ್ಯದರ್ಶಿ ಆರ್. ಎಂ. ವಾಲಿ, ಪ್ರಾಂಶುಪಾಲ ಡಾ. ಬಿ.ಎಂ.ತುರಡಗಿ, ಉಪ-ಪ್ರಾಂಶುಪಾಲ ಡಾ. ಆರ್.ಎಸ್.ಬಳಿಗಾರ ಭಾಗಿಯಾಗಿದ್ದರು.
ಪ್ರಾಂಶುಪಾಲ ಡಾ. ಬಿ.ಎಂ.ತುರಡಗಿ ಸ್ವಾಗತಿಸಿದರು. ಸಂಯೋಜಕ ಡಾ. ಎಂ.ಎಫ್.ನಾಗಣ್ಣವರ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಡಾ. ಕೃಷ್ಣಮೂರ್ತಿ ಎಂ.ಎಸ್. ಮತ್ತು ಸಂತೋಷ ಚೌವ್ಹಾಣ ನಿರೂಪಿಸಿದರು. ಡಾ. ಬಿ.ಎಂ. ಮಾಸ್ತಿಹೊಳಿ ವಂದಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.