ADVERTISEMENT

ಮೂಡಲಗಿ: ಕಾರುಗಳ ಮುಖಾಮುಖಿ ಡಿಕ್ಕಿ, ಅಣ್ಣ, ತಂಗಿ ಸ್ಥಳದಲ್ಲೇ ಸಾವು

​ಪ್ರಜಾವಾಣಿ ವಾರ್ತೆ
Published 8 ಡಿಸೆಂಬರ್ 2022, 5:33 IST
Last Updated 8 ಡಿಸೆಂಬರ್ 2022, 5:33 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮೂಡಲಗಿ (ಬೆಳಗಾವಿ ಜಿಲ್ಲೆ): ತಾಲ್ಲೂಕಿನ ಗುರ್ಲಾಪುರ ಬಳಿ ಮೂದೋಳ– ನಿಪ್ಪಾಣಿ ರಾಜ್ಯ ಹೆದ್ದಾರಿ–18ರಲ್ಲಿ ಗುರುವಾರ ನಸುಕಿನಲ್ಲಿ ಎರಡು ಕಾರುಗಳ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ, ಅಣ್ಣ, ತಂಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನೊಂದು ಕಾರಿನಲ್ಲಿದ್ದ ಮೂವರು ಗಾಯಗೊಂಡಿದ್ದಾರೆ.

ಮೃತರನ್ನು ರಾಯಬಾಗ ತಾಲ್ಲೂಕಿನ ಕಪ್ಪಲಗುದ್ದಿ ಗ್ರಾಮದ ದುಂಡಪ್ಪ ಅಡಿವೆಪ್ಪ ಬಡಿಗೇರ (34), ಇವರ ಸಹೋದರಿ ಭಾಗ್ಯಶ್ರೀ ನವೀನ ಕಂಬಾರ (22) ಎಂದು ಗುರುತಿಸಲಾಗಿದೆ.

ಈ ಇಬ್ಬರೂ ತನ್ನ ಕಾರಿನಲ್ಲಿ ಧಾರವಾಡದಿಂದ ಕಪ್ಪಲಗುದ್ದಿ ಗ್ರಾಮಕ್ಕೆ ಹೊರಟಿದ್ದರು. ಇದೇ ವೇಳೆ ಲೋಕಾಪುರದಿಂದ ಪುಣೆ ಕಡೆಗೆ ಹೊರಟಿದ್ದ ಇನ್ನೊಂದು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿತು ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ಗಾಯಗೊಂಡ ಮೂವರನ್ನು ಗೋಕಾಕದ ಉಮರಾಣಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ರಭಸಕ್ಕೆ ಎರಡೂ ಕಾರುಗಳು ನಜ್ಜುಗುಜ್ಜಾಗಿವೆ.

ಮೂಡಲಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.