ADVERTISEMENT

ವಿಷ ಕುಡಿದು ಏಕಕಾಲಕ್ಕೆ ಸಹೋದರರ ಸಾವು! ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ

​ಪ್ರಜಾವಾಣಿ ವಾರ್ತೆ
Published 31 ಮೇ 2025, 14:39 IST
Last Updated 31 ಮೇ 2025, 14:39 IST
<div class="paragraphs"><p>ಸಾವು&nbsp;(ಪ್ರಾತಿನಿಧಿಕ ಚಿತ್ರ)</p></div>

ಸಾವು (ಪ್ರಾತಿನಿಧಿಕ ಚಿತ್ರ)

   

ಬೆಳಗಾವಿ: ಜಿಲ್ಲೆಯ ಹುಕ್ಕೇರಿ ತಾಲ್ಲೂಕಿನ ಕೋಣನಕೇರಿ ಗ್ರಾಮದಲ್ಲಿ ಶನಿವಾರ ಇಬ್ಬರು ಸಹೋದರರು ವಿಷ ಕುಡಿದು ಏಕಕಾಲಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸಂತೋಷ ರವೀಂದ್ರ ಗುಂಡೆ (56) ಹಾಗೂ ಅಣ್ಣಾಸಾಹೇಬ ರವೀಂದ್ರ ಗುಂಡೆ (50) ಆತ್ಮಹತ್ಯೆ ಮಾಡಿಕೊಂಡವರು. ಇವರಿಬ್ಬರಿಗೂ ಮದುವೆ ಆಗಿರಲಿಲ್ಲ. ಕುಡಿತದ ಚಟಕ್ಕೆ ಬಿದ್ದಿದ್ದರು. ಮಾನಸಿಕವಾಗಿ ಖಿನ್ನತೆಗೆ ಒಳಗಾಗಿದ್ದರು ಎಂದು ಕುಟುಂಬದವರು ಮಾಹಿತಿ ನೀಡಿದ್ದಾರೆ. ತನಿಖೆ ಬಳಿಕ ನಿಖರ ಕಾರಣ ಗೊತ್ತಾಗಲಿದೆ ಎಂದು ಸಂಕೇಶ್ವರ ಪೊಲೀಸರು ತಿಳಿಸಿದ್ದಾರೆ.

ADVERTISEMENT

ಶುಕ್ರವಾರ ರಾತ್ರಿ ಮದ್ಯದ ಅಮಲಿನಲ್ಲಿ ಇಬ್ಬರೂ ವಿಷ ಕುಡಿದಿದ್ದರು. ಅವರನ್ನು ಮಹಾರಾಷ್ಟ್ರದ ಗಡಹಿಂಗ್ಲಜ್‌ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಕೊನೆಯುಸಿರೆಳೆದರು ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.