ಬೆಳಗಾವಿ: ‘ಇಲ್ಲಿನ ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರ(ಬುಡಾ)ದಿಂದ ಕೈಗೊಂಡಿರುವ ವಿವಿಧ ಯೋಜನೆಗಳಿಗೆ ಗಣ್ಯರ ಹೆಸರು ನಾಮಕರಣ ಮಾಡಲು ನಗರಾಭಿವೃದ್ಧಿ ಇಲಾಖೆ ಅನುಮೋದನೆ ನೀಡಿದೆ’ ಎಂದು ಅಧ್ಯಕ್ಷ ಘೂಳಪ್ಪ ಹೊಸಮನಿ ತಿಳಿಸಿದ್ದಾರೆ.
‘ಕಣಬರ್ಗಿಯಲ್ಲಿ ಕೈಗೊಂಡಿರುವ ಯೋಜನೆ ಸಂಖ್ಯೆ 61ಕ್ಕೆ (ಬಡಾವಣೆ ಅಭಿವೃದ್ಧಿ) ಬಿ.ಎಸ್. ಯಡಿಯೂರಪ್ಪ, ಅಲ್ಲೇ ನಿರ್ಮಿಸಲಿರುವ ಬಹುಮಹಡಿ ಸಮುಚ್ಛಯಗಳಿಗೆ ರೈಲ್ವೆ ಖಾತೆ ರಾಜ್ಯ ಸಚಿವರಾಗಿದ್ದ ದಿವಂಗತ ಸುರೇಶ ಆಂಗಡಿ ಹಾಗೂ ರಾಮತೀರ್ಥ ನಗರದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಅಂತರರಾಷ್ಟ್ರೀಯ ಗುಣಮಟ್ಟದ ಹಾಕಿ ಮೈದಾನಕ್ಕೆ ಹಾಕಿ ಪಟು ಬಂಡು ಪಾಟೀಲ ಅವರ ಹೆಸರು ನಾಮಕರಣ ಮಾಡಲು ಅನುಮತಿ ಕೋರಿ ಸಭೆಯಲ್ಲಿ ಚರ್ಚಿಸಿ ಪ್ರಸ್ತಾವ ಸಲ್ಲಿಸಲಾಗಿತ್ತು’ ಎಂದು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.