ಬಿ.ವೈ.ವಿಜಯೇಂದ್ರ
(ಸಂಗ್ರಹ ಚಿತ್ರ)
ಬೆಳಗಾವಿ: ‘ಕೇಂದ್ರ ಸರ್ಕಾರದ ವಿರುದ್ಧ ಜನರನ್ನು ಎತ್ತಿ ಕಟ್ಟಲು ರಾಜ್ಯ ಸರ್ಕಾರವು ಸದನವನ್ನೇ ಬಳಸಿಕೊಳ್ಳುತ್ತಿರುವುದು ಖಂಡನೀಯ. ಇದರಿಂದ ಸಿದ್ದರಾಮಯ್ಯ ಅವರೇ ಶಾಸನ ಸಭೆಯ ಪಾವಿತ್ರ್ಯ ಹಾಳು ಮಾಡಿದ್ದಾರೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಟೀಕಿಸಿದರು.
ಇಲ್ಲಿ ಶುಕ್ರವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಮನರೇಗಾ ಯೋಜನೆಯನ್ನು ಪ್ರಧಾನಿ ಮೋದಿ ಅವರು ವಿಬಿ– ಜಿ ರಾಮ್ ಜಿ ಎಂದು ಸ್ವರೂಪ ನೀಡಿದ್ದಾರೆ. ದೇಶದ ಬಡವರು ಮತ್ತು ಕಾರ್ಮಿಕರಿಗೆ ಅನುಕೂಲ ಆಗಬೇಕು ಎಂಬುದು ಇದರ ಉದ್ದೇಶ. ಈ ಬಗ್ಗೆ ಗೊಂದಲಗಳಿದ್ದರೆ ಚರ್ಚಿಸಬೇಕು. ಆದರೆ, ಅದೇ ನೆಪದಲ್ಲಿ ವಿಶೇಷ ಅಧಿವೇಶನ ಕರೆದು ಕೇಂದ್ರ ಸರ್ಕಾರದ ವಿರುದ್ಧ ದ್ವೇಷ ಸಾಧಿಸಲು ಹೊರಟಿರುವುದು ಸರಿಯಲ್ಲ’ ಎಂದರು.
ರಾಜ್ಯ ರಾಜಕಾರಣಕ್ಕೆ ಮರಳುವುದಾಗಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ನೀಡಿದ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ವಿಜಯೇಂದ್ರ, ‘ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗಿ ಕೊಡುಗೆ ನೀಡಿದ್ದಾರೆ. ಮತ್ತೆ ರಾಜ್ಯ ರಾಜಕಾಣಕ್ಕೆ ಬಂದರೆ ಅದರಲ್ಲಿ ತಪ್ಪೇನಿದೆ?’ ಎಂದು ಪ್ರಶ್ನಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.