ADVERTISEMENT

ಉಪ ಚುನಾವಣೆ: ಸತೀಶ ಹೆಸರೂ ಚರ್ಚೆ

​ಪ್ರಜಾವಾಣಿ ವಾರ್ತೆ
Published 21 ನವೆಂಬರ್ 2020, 20:23 IST
Last Updated 21 ನವೆಂಬರ್ 2020, 20:23 IST

ಬೆಳಗಾವಿ: ‘ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ವಿಚಾರವಾಗಿ ಕೆಪಿಸಿಸಿ ರಚಿಸಿದ ಸಮಿತಿ ಸಭೆಯಲ್ಲಿ ಸತೀಶ ಜಾರಕಿಹೊಳಿ ಸೇರಿದಂತೆ ಏಳೆಂಟು ಮಂದಿಯ ಹೆಸರುಗಳು ಚರ್ಚೆಗೆ ಬಂದಿವೆ’ ಎಂದುಶಾಸಕರೂ ಆಗಿರುವ ಆಯ್ಕೆ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ ತಿಳಿಸಿದರು.

ಇಲ್ಲಿನ ಕಾಂಗ್ರೆಸ್ ಭವನದಲ್ಲಿ ಶನಿವಾರ ನಡೆದ ಸಭೆ ಬಳಿಕ ಪತ್ರಕರ್ತರೊಂದಿಗೆ ಅವರು ಮಾತನಾಡಿದ ಅವರು, ‘ವಾರದಲ್ಲಿ ಮತ್ತೊಮ್ಮೆ ಸಮಾಲೋಚಿಸಿ, ಆಕಾಂಕ್ಷಿಗಳ ಪಟ್ಟಿಯನ್ನು ಹೈಕಮಾಂಡ್‌ಗೆ ಸಲ್ಲಿಸಲಾಗುವುದು’ ಎಂದು

ಪಕ್ಷದ ನಿರ್ಧಾರಕ್ಕೆ ಬದ್ಧ: ‘ಉಪ ಚುನಾವಣೆ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಪಕ್ಷ ಕೈಗೊಳ್ಳುವ ನಿರ್ಧಾರಕ್ಕೆ ನಾನು ಬದ್ಧ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷರೂ ಆಗಿರುವ ಶಾಸಕ ಸತೀಶ ಜಾರಕಿಹೊಳಿ ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.