ADVERTISEMENT

ಕರ್ನಾಟಕ ಬಂದ್‌ಗೆ ಕರೆ: ಯಾವುದೇ ಬದಲಾವಣೆ ಇಲ್ಲ- ವಾಟಾಳ್ ನಾಗರಾಜ್

​ಪ್ರಜಾವಾಣಿ ವಾರ್ತೆ
Published 29 ಡಿಸೆಂಬರ್ 2021, 7:25 IST
Last Updated 29 ಡಿಸೆಂಬರ್ 2021, 7:25 IST
ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್
ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್   

ಬೆಳಗಾವಿ: ಮಹಾರಾಷ್ಟ್ರ ಏಕೀಕರಣ ‌ಸಮಿತಿ (ಎಂಇಎಸ್) ಸಂಘಟನೆಯನ್ನು ರಾಜ್ಯದಲ್ಲಿ ನಿಷೇಧಿಸುವಂತೆ ಆಗ್ರಹಿಸಿ ಡಿ.31ರಂದು ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ. ಇದರಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ತಿಳಿಸಿದರು.

ಬಂದ್ ಬೆಂಬಲಿಸುವಂತೆ ಜನರನ್ನು ಕೋರುವುದಕ್ಕಾಗಿ ಇಲ್ಲಿನ‌ ರಾಣಿ ಚನ್ನಮ್ಮ ವೃತ್ತದಲ್ಲಿ ಬುಧವಾರ ಪ್ರತಿಭಟನೆ ನಡೆಸುವ ಮುನ್ನ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು.

ಯಾವುದೇ ಕಾರಣಕ್ಕೂ ಬಂದ್‌ನಿಂದ ಹಿಂದೆ ಸರಿಯುವುದಿಲ್ಲ. ಅಂದು ಬೆಂಗಳೂರಿನ ಪುರಭವನದಿಂದ ಸ್ವಾತಂತ್ರ್ಯ ಉದ್ಯಾನದವರೆಗೆ ಮೆರವಣಿಗೆ ನಡೆಸಲಾಗುವುದು. ಸಾವಿರಾರು ಮಂದಿ ಭಾಗವಹಿಸಲಿದ್ದಾರೆ.‌ ಜನರು ನಮ್ಮ ಉದ್ದೇಶವನ್ನು ಅರಿತು ಬಂದ್‌ಗೆ ಬೆಂಬಲ ಕೊಡಬೇಕು ಎಂದು ಕೋರಿದರು.

ADVERTISEMENT

ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅವರು ಹಾಗೂ 15 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.