ADVERTISEMENT

ಕರಾಳ ದಿನಾಚರಣೆ: ಎಂಇಎಸ್ ವಿರುದ್ಧ ದೂರು ದಾಖಲು

​ಪ್ರಜಾವಾಣಿ ವಾರ್ತೆ
Published 2 ನವೆಂಬರ್ 2025, 20:57 IST
Last Updated 2 ನವೆಂಬರ್ 2025, 20:57 IST

ಬೆಳಗಾವಿ: ಅನುಮತಿ ಇಲ್ಲದೆ ನಗರದಲ್ಲಿ ಶನಿವಾರ ಕರಾಳ ದಿನ ಆಚರಿಸಿದ ಮಹಾರಾಷ್ಟ್ರ ಏಕೀಕರಣ ಸಮಿತಿಯ(ಎಂಇಎಸ್) 36 ಕಾರ್ಯಕರ್ತರ ವಿರುದ್ಧ ಮಾರ್ಕೆಟ್ ಠಾಣೆಯಲ್ಲಿ ಭಾನುವಾರ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿದೆ.

ಕರ್ನಾಟಕ ರಾಜ್ಯೋತ್ಸವಕ್ಕೆ ಪರ್ಯಾಯವಾಗಿ ಎಂಇಎಸ್ ಕರಾಳ ದಿನ ಆಚರಿಸಿತ್ತು. ಇದರಲ್ಲಿ ಭಾಗವಹಿಸಿದ್ದ ಕಾರ್ಯಕರ್ತರು ನಾಡವಿರೋಧಿ ಘೋಷಣೆಗಳನ್ನು ಕೂಗಿದ್ದರು. ಇದಕ್ಕೆ ಕನ್ನಡಿಗರಿಂದ ಆಕ್ರೋಶ ವ್ಯಕ್ತವಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT