ADVERTISEMENT

ಫೇಸ್‌ಬುಕ್‌ನಲ್ಲಿ ದ್ವೇಷ ಬಿತ್ತುವ ಸಂದೇಶ ಹಾಕಿದ ಆರೋಪಿ ವಿರುದ್ದ ಪ್ರಕರಣ ದಾಖಲು

​ಪ್ರಜಾವಾಣಿ ವಾರ್ತೆ
Published 20 ಆಗಸ್ಟ್ 2020, 15:41 IST
Last Updated 20 ಆಗಸ್ಟ್ 2020, 15:41 IST
ಫೇಸ್‌ಬುಕ್‌
ಫೇಸ್‌ಬುಕ್‌   

‌ಬೆಳಗಾವಿ: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ಇಲ್ಲಿನ ಪೀರಣವಾಡಿ ನಾಕಾದಲ್ಲಿ ಸ್ಥಾಪಿಸುವುದಕ್ಕೆ ಸಂಬಂಧಿಸಿದಂತೆ ಮರಾಠಿಗರ ವಿರುದ್ಧ ದ್ವೇಷ ಮೂಡುವ ಸಂದೇಶಗಳನ್ನು ಫೇಸ್‌ಬುಕ್‌ನಲ್ಲಿ ಹಾಕಿದ ಆರೋಪದ ಮೇಲೆ ಕರ್ನಾಟಕ ರಣಧೀರ ಪಡೆಯ ರಾಜ್ಯಾಧ್ಯಕ್ಷ, ಬೆಂಗಳೂರಿನ ಭೈರಪ್ಪಾ ಹರೀಶಕುಮಾರ ವಿರುದ್ಧ ಬೆಳಗಾವಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಗೊಳ್ಳಿ ರಾಯಣ್ಣನ ಪ್ರತಿಮೆ ಸ್ಥಾಪಿಸುವಂತೆ ಒತ್ತಾಯಿಸಿ ಇದೇ 17ರಂದು ಬೆಳಗಾವಿಯಲ್ಲಿ ಹಲವು ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು. ಇದಕ್ಕೆ ಬೆಂಬಲ ನೀಡುವ ಉದ್ದೇಶದಿಂದ ಭೈರಪ್ಪ ಅವರು, ‘ಮುಂದಿನ ಸೋಮವಾರ ಬೆಳಗಾವಿಗೆ ಹೋಗಲು ತಯಾರಾಗಿ ಮರಾಠಿ ಪುಂಡರ ಸೊಕ್ಕು ಮುರಿದು ರಾಯಣ್ಣ ಪ್ರತಿಮೆ ಪ್ರತಿಷ್ಠಾಪಣೆ ಮಾಡಿ ಬರೋಣ’ ಎಂದು ತಮ್ಮ ಫೇಸ್‌ಬುಕ್‌ ಪುಟದಲ್ಲಿ ಬರೆದಿದ್ದರು.

ಈ ಮೂಲಕ ಕನ್ನಡ ಮತ್ತು ಮರಾಠಿ ಭಾಷಿಕರ ನಡುವೆ ದ್ವೇಷ ಹರಡಿಸಲು ಹಾಗೂ ಸಾರ್ವಜನಿಕ ಶಾಂತತೆಗೆ ಧಕ್ಕೆ ತರಲು ಪ್ರಯತ್ನಿಸಿದ್ದಾರೆ ಎಂದು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.