ADVERTISEMENT

ಹಳದಿ–ಕೆಂಪು ಶಾಲಿನವರನ್ನು ಥಳಿಸುತ್ತೇವೆ ಎಂದಿದ್ದ ವ್ಯಕ್ತಿ ವಿರುದ್ಧ ಪ್ರಕರಣ

ಪ್ರಚೋದನಕಾರಿ ಹೇಳಿಕೆ ನೀಡಿದ್ದ ಶುಭಂ ವಿರುದ್ಧ ಪ್ರಕರಣ

​ಪ್ರಜಾವಾಣಿ ವಾರ್ತೆ
Published 16 ಮಾರ್ಚ್ 2021, 10:38 IST
Last Updated 16 ಮಾರ್ಚ್ 2021, 10:38 IST
ಬೆಳಗಾವಿಯಲ್ಲಿ ಮಹಾರಾಷ್ಟ್ರ ಏಕೀಕರಣ ಯುವ ಸಮಿತಿ ಅಧ್ಯಕ್ಷ ಶುಭಂ ಸೆಳಕೆ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕನ್ನಡಪರ ಹೋರಾಟಗಾರರು ಡಿಸಿಪಿ ವಿಕ್ರಂ ಅಮಟೆ ಅವರಿಗೆ ಮಂಗಳವಾರ ಮನವಿ ಸಲ್ಲಿಸಿದರು
ಬೆಳಗಾವಿಯಲ್ಲಿ ಮಹಾರಾಷ್ಟ್ರ ಏಕೀಕರಣ ಯುವ ಸಮಿತಿ ಅಧ್ಯಕ್ಷ ಶುಭಂ ಸೆಳಕೆ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕನ್ನಡಪರ ಹೋರಾಟಗಾರರು ಡಿಸಿಪಿ ವಿಕ್ರಂ ಅಮಟೆ ಅವರಿಗೆ ಮಂಗಳವಾರ ಮನವಿ ಸಲ್ಲಿಸಿದರು   

ಬೆಳಗಾವಿ: ‘ಹಳದಿ ಮತ್ತು ಕೆಂಪು ಬಣ್ಣದ ಶಾಲುಹಾಕಿಕೊಂಡುಓಡಾಡುವವರನ್ನು ಕಂಡಲ್ಲಿಯೇಥಳಿಸುತ್ತೇವೆ’ಎಂದು ಮಹಾರಾಷ್ಟ್ರ ಏಕೀಕರಣ ಯುವ ಸಮಿತಿಅಧ್ಯಕ್ಷಶುಭಂಸೆಳಕೆ ನೀಡಿರುವಹೇಳಿಕೆ ಸಾಮಾಜಿಕ ಜಾಲತಾಣದಲ್ಲಿವೈರಲ್ಆಗಿದೆ.

ಅವರು ಈಚೆಗೆ ನಡೆದ ಎಂಇಎಸ್ ಕಾರ್ಯಕ್ರಮವೊಂದರಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿದ್ದರು. ಅವರವಿರುದ್ಧಕನ್ನಡ ಪರಹೋರಾಟಗಾರರು ತೀವ್ರ ಆಕ್ರೋಶವ್ಯಕ್ತಪಡಿಸಿದ್ದಾರೆ. ಕ್ರಮಕ್ಕೆಆಗ್ರಹಿಸಿ ನಗರಪೊಲೀಸ್ಆಯುಕ್ತರಕಚೇರಿಗೆ ಮಂಗಳವಾರ ಮನವಿಸಲ್ಲಿಸಿದರು.

‘ಕನ್ನಡಿಗರನ್ನು ಅವಹೇಳನ ಮಾಡುವ ರೀತಿಯಲ್ಲಿ ಹೇಳಿಕೆ ನೀಡಿರುವ ಹಾಗೂ ಬೆದರಿಕೆ ಹಾಕಿರುವ ಆ ವ್ಯಕ್ತಿಯ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು. ಮುಗ್ಧ ಮರಾಠಿ ಭಾಷಿಗರಿಗೆ ಪ್ರಚೋದನೆ ನೀಡಿ ಕನ್ನಡಿಗರ ವಿರುದ್ಧ ಎತ್ತಿ ಕಟ್ಟುವ ಹುನ್ನಾರವನ್ನು ತಡೆಯಬೇಕು. ಸೌಹಾರ್ದದಿಂದ ಬದುಕುತ್ತಿರುವ ಜನರ ನಡುವೆ ವಿಷ ಬೀಜ ಬಿತ್ತಿ ಶಾಂತಿ–ಸುವ್ಯವಸ್ಥೆ ಹಾಳು ಮಾಡುವಂತಹ ಹೇಳಿಕೆ ನೀಡಿರುವುದನ್ನು ಗಂಭೀರವಾಗಿ ಪರಿಗಣಿಸಬೇಕು. ಅವರನ್ನು ಗಡಿಪಾರು ಮಾಡಬೇಕು. ಎಂಇಎಸ್ (ಮಹಾರಾಷ್ಟ್ರ ಏಕೀಕರಣ ಸಮಿತಿ) ಸಂಘಟನೆಯನ್ನು ನಿಷೇಧಿಸಬೇಕು’ ಎಂದು ಒತ್ತಾಯಿಸಿ ಡಿಸಿಪಿ ವಿಕ್ರಂ ಅಮಟೆ ಅವರಿಗೆ ಮನವಿ ಸಲ್ಲಿಸಿದರು. ಭಾಷಣದ ವಿಡಿಯೊವುಳ್ಳ ಸಿ.ಡಿ. ಪ್ರತಿಯನ್ನೂ ನೀಡಿದರು.

ADVERTISEMENT

ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ, ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣಗೌಡ ಬಣ) ರಾಜ್ಯ ಸಂಚಾಲಕ ಮಹಾದೇವ ತಳವಾರ, ಜಿಲ್ಲಾ ಘಟಕದ ಅಧ್ಯಕ್ಷ ದೀಪಕ ಗುಡಗನಟ್ಟಿ, ಸುರೇಶ ಲಗಮಪ್ಪ ಗವನ್ನವರ ಪಾಲ್ಗೊಂಡಿದ್ದರು.

‘ಪ್ರಚೋದನಕಾರಿ ಹೇಳಿಕೆ ನೀಡಿರುವ ಶುಭಂ ವಿರುದ್ಧ ಖಡೇಬಜಾರ್‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ’ ಎಂದು ಡಿಸಿಪಿ ವಿಕ್ರಂ ಅಮಟೆ ‘ಪ್ರಜಾವಾಣಿ’ಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.