ADVERTISEMENT

‘ಬಸವ ಜಯಂತಿ ಮನೆಗಳಲ್ಲೇ ಆಚರಿಸಿ’

​ಪ್ರಜಾವಾಣಿ ವಾರ್ತೆ
Published 22 ಏಪ್ರಿಲ್ 2020, 13:29 IST
Last Updated 22 ಏಪ್ರಿಲ್ 2020, 13:29 IST

ಬೆಳಗಾವಿ: ‘ಲಾಕ್‌ಡೌನ್‌ ಜಾರಿಯಲ್ಲಿರುವುದರಿಂದ ಈ ಬಾರಿಯ ಬಸವ ಜಯಂತಿಯನ್ನು (ಏ.26) ಮನೆಗಳಲ್ಲಿಯೇ ಸರಳವಾಗಿ ಆಚರಿಸಬೇಕು’ ಎಂದು ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷೆ ರತ್ನಪ್ರಭಾ ಬೆಲ್ಲದ ಕೋರಿದ್ದಾರೆ.

‘ಬಸವ ಜಯಂತಿಯನ್ನು ಅದ್ಧೂರಿಯಾಗಿ ಆಚರಿಸಬೇಕು ಎಂದು ಪೂರ್ವಭಾವಿ ಸಭೆಯಲ್ಲಿ ನಿರ್ಧರಿಸಲಾಗಿತ್ತು. ಅದಕ್ಕಾಗಿ ತಯಾರಿಯನ್ನೂ ಮಾಡಿಕೊಳ್ಳಲಾಗಿತ್ತು. ಆದರೆ, ಕೊರೊನಾ ವೈರಾಣು ಹರಡುವ ಭೀತಿಯಿಂದಾಗಿ ಸಾರ್ವಜನಿಕ ಆಚರಣೆ ರದ್ದುಪಡಿಸಲಾಗಿದೆ. ಸೋಂಕು ಹರಡದಂತೆ ನೋಡಿಕೊಳ್ಳಲು ಅಂತರ ಕಾಯ್ದುಕೊಳ್ಳುವ ಅನಿವಾರ್ಯತೆ ಇರುವುದರಿಂದಾಗಿ ಎಲ್ಲರೂ ಮನೆಯಲ್ಲೇ ಕುಟುಂಬದವರೊಂದಿಗೆ ವಚನ ಪಠಣ ಮಾಡುತ್ತಾ ಜಯಂತಿ ಆಚರಿಸಬೇಕು’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT