ADVERTISEMENT

ಸಿಇಟಿ ಪರೀಕ್ಷೆ ಸುಗಮ

​ಪ್ರಜಾವಾಣಿ ವಾರ್ತೆ
Published 29 ಏಪ್ರಿಲ್ 2019, 14:38 IST
Last Updated 29 ಏಪ್ರಿಲ್ 2019, 14:38 IST

ಬೆಳಗಾವಿ: ಎಂಜಿನಿಯರಿಂಗ್‌ ಸೇರಿ ಕೆಲವು ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಸೋಮವಾರ ಸುಗಮವಾಗಿ ನಡೆಯಿತು.

ಬೆಳಗಾವಿ, ಚಿಕ್ಕೋಡಿ, ಗೋಕಾಕ ಮತ್ತು ಅಥಣಿ ತಾಲ್ಲೂಕುಗಳಲ್ಲಿ ಒಟ್ಟು 22 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಿತು. ನಗರದಲ್ಲಿ 4,831 ಸೇರಿ ಜಿಲ್ಲೆಯಲ್ಲಿ ಒಟ್ಟು 9,782 ವಿದ್ಯಾರ್ಥಿಗಳು ನೋಂದಾಯಿಸಿದ್ದಾರೆ. ಬೆಳಗಾವಿ ನಗರದಲ್ಲಿ 10, ಚಿಕ್ಕೋಡಿಯಲ್ಲಿ 5, ಗೋಕಾಕದಲ್ಲಿ 4 ಹಾಗೂ ಅಥಣಿಯಲ್ಲಿ 3 ಕೇಂದ್ರಗಳಲ್ಲಿ ಪರೀಕ್ಷೆ ಜರುಗಿತು.

ಬೆಳಿಗ್ಗೆ 10.30ರಿಂದ 11.50ರವರೆಗೆ ಜೀವವಿಜ್ಞಾನ ಹಾಗೂ ಮಧ್ಯಾಹ್ನ 2.30ರಿಂದ 3.50ರವರೆಗೆ ಗಣಿತವಿಜ್ಞಾನ ವಿಷಯದ ಪರೀಕ್ಷೆ ನಡೆಯಿತು. ನಗರದ ಜ್ಯೋತಿ, ಜೆ.ಎ. ಸವದತ್ತಿ, ಎಂ.ಎಂ., ಲಿಂಗರಾಜ, ಆರ್‌ಎಲ್‌ಎಸ್, ಇಸ್ಲಾಮಿಯಾ, ಗೋಗಟೆ, ಗೋಮಟೇಶ, ಭರತೇಶ, ಸರ್ಕಾರಿ ಸರ್ದಾರ್‌ ಪಿಯು ಕಾಲೇಜು ಕೇಂದ್ರಗಳಲ್ಲಿ ಪರೀಕ್ಷೆ ನಡೆಯಿತು. ನೋಂದಾಯಿಸಿದ್ದ 4,831 ವಿದ್ಯಾರ್ಥಿಗಳಲ್ಲಿ 3,749 ಮಂದಿ ಹಾಜರಾದರು. 1,082 ವಿದ್ಯಾರ್ಥಿಗಳು ಗೈರು ಹಾಜರಾದರು.

ADVERTISEMENT

ಏ. 30ರಂದು ಬೆಳಿಗ್ಗೆ 10.30ರಿಂದ 11.50ರವರೆಗೆ ಭೌತವಿಜ್ಞಾನ ಹಾಗೂ ಮಧ್ಯಾಹ್ನ 2.30ರಿಂದ 3.50ರವರೆಗೆ ರಸಾಯನವಿಜ್ಞಾನ ಪರೀಕ್ಷೆ ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.