ಸಾಂದರ್ಭಿಕ ಚಿತ್ರ
ಬೆಳಗಾವಿ: ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ಜಿಲ್ಲೆಯಲ್ಲಿ ಬುಧವಾರ ಸಾಮಾನ್ಯ ಪ್ರವೇಶ ಪರೀಕ್ಷೆ ಸುಗಮವಾಗಿ ನಡೆಯಿತು.
ಬೆಳಗಾವಿ ಶೈಕ್ಷಣಿಕ ಜಿಲ್ಲೆಯ 21 ಕೇಂದ್ರಗಳಲ್ಲಿ ಬೆಳಿಗ್ಗೆ 10.30ರಿಂದ 11.50ರವರೆಗೆ ನಡೆದ ಭೌತ ವಿಜ್ಞಾನ ವಿಷಯದ ಪರೀಕ್ಷೆಗೆ 7,939 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. ಈ ಪೈಕಿ 7,436 ವಿದ್ಯಾರ್ಥಿಗಳು ಹಾಜರಾದರೆ, 503 ವಿದ್ಯಾರ್ಥಿಗಳು ಗೈರಾಗಿದ್ದರು.
ಮಧ್ಯಾಹ್ನ 2.30ರಿಂದ 3.50 ರವರೆಗೆ ನಡೆದ ರಸಾಯನ ವಿಜ್ಞಾನ ವಿಷಯದ ಪರೀಕ್ಷೆಗೆ 7,939 ವಿದ್ಯಾರ್ಥಿಗಳ ಪೈಕಿ 7,430 ವಿದ್ಯಾರ್ಥಿಗಳು ಹಾಜರಾದರು. 509 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿಲ್ಲ.
ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ 28 ಕೇಂದ್ರಗಳಲ್ಲಿ ನಡೆದ ಭೌತ ವಿಜ್ಞಾನ ವಿಷಯದ ಪರೀಕ್ಷೆಗೆ 10,597 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಈ ಪೈಕಿ 10,153 ವಿದ್ಯಾರ್ಥಿಗಳು ಹಾಜರಾದರೆ, 444 ವಿದ್ಯಾರ್ಥಿಗಳು ಗೈರು ಹಾಜರಾದರು.
ರಸಾಯನ ವಿಜ್ಞಾನ ವಿಷಯದ ಪರೀಕ್ಷೆಗೆ 10,597 ವಿದ್ಯಾರ್ಥಿಗಳಲ್ಲಿ 10,152 ವಿದ್ಯಾರ್ಥಿಗಳು ಹಾಜರಾದರೆ, 445 ವಿದ್ಯಾರ್ಥಿಗಳು ಗೈರಾಗಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.