ADVERTISEMENT

ಅಂಧ ಕ್ರಿಕೆಟಿಗರನ್ನು ಹುರಿದುಂಬಿಸಿದ ಶ್ರೀ

​ಪ್ರಜಾವಾಣಿ ವಾರ್ತೆ
Published 7 ಫೆಬ್ರುವರಿ 2023, 5:10 IST
Last Updated 7 ಫೆಬ್ರುವರಿ 2023, 5:10 IST
ಬೆಳಗಾವಿಯ ಕರ್ನಾಟಕ ರಾಜ್ಯ ಕ್ರಿಕೆಟ್‌ ಅಕಾಡೆಮಿ ಮೈದಾನದಲ್ಲಿ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಅವರು ಕರ್ನಾಟಕ ತಂಡದ ಆಟಗಾರ ಲೋಕೇಶ ಅವರಿಗೆ ಸೋಮವಾರ ಪಂದ್ಯಶ್ರೇಷ್ಠ ಪ್ರಶಸ್ತಿ ನೀಡಿ ಗೌರವಿಸಿದರು
ಬೆಳಗಾವಿಯ ಕರ್ನಾಟಕ ರಾಜ್ಯ ಕ್ರಿಕೆಟ್‌ ಅಕಾಡೆಮಿ ಮೈದಾನದಲ್ಲಿ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಅವರು ಕರ್ನಾಟಕ ತಂಡದ ಆಟಗಾರ ಲೋಕೇಶ ಅವರಿಗೆ ಸೋಮವಾರ ಪಂದ್ಯಶ್ರೇಷ್ಠ ಪ್ರಶಸ್ತಿ ನೀಡಿ ಗೌರವಿಸಿದರು   

ಬೆಳಗಾವಿ: ಇಲ್ಲಿನ ಕರ್ನಾಟಕ ರಾಜ್ಯ ಕ್ರಿಕೆಟ್‌ ಅಕಾಡೆಮಿ ಮೈದಾನಕ್ಕೆ ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಸೋಮವಾರ ಭೇಟಿ ನೀಡಿ, ಪುರುಷರ ರಾಷ್ಟ್ರಮಟ್ಟದ ಅಂಧರ ಟಿ20 ಟೂರ್ನಿ ವೀಕ್ಷಿಸಿದರು.

‘ಅಂಧರ ಬಗ್ಗೆ ಅನುಕಂಪ ತೋರುವುದಕ್ಕಿಂತ, ಅವಕಾಶ ಕಲ್ಪಿಸಿ’ ಎಂದು ಕೋರಿದ ಶ್ರೀಗಳು, ಅಂಧ ಕ್ರಿಕೆಟಿಗರನ್ನು ಹುರಿದುಂಬಿಸಿದರು. ಪಶ್ಚಿಮ ಬಂಗಾಳ ತಂಡದ ವಿರುದ್ಧದ ಪಂದ್ಯದಲ್ಲಿ ಶತಕ ಬಾರಿಸಿದ ಲೋಕೇಶ ಅವರಿಗೆ ‘ಪಂದ್ಯಶ್ರೇಷ್ಠ ಪ್ರಶಸ್ತಿ’ ನೀಡಿ ಗೌರವಿಸಿದರು. ಸಮರ್ಥನಂ ಅಂಗವಿಕಲರ ಸಂಸ್ಥೆಯ ಸಂಸ್ಥಾಪಕ ಮಹಾಂತೇಶ ಕಿವಡಸಣ್ಣವರ, ಬೆಳಗಾವಿ ಶಾಖೆ ಮುಖ್ಯಸ್ಥ ಎಂ.ಜಿ.ಅರುಣಕುಮಾರ್‌ ಇತರರಿದ್ದರು.

ಸಮರ್ಥನಂ ಅಂಗವಿಕಲರ ಸಂಸ್ಥೆ, ಪ್ರಜಾವಾಣಿ, ಇಂಡಸ್‌ಇಂಡ್‌ ಬ್ಯಾಂಕ್‌, ಕರ್ನಾಟಕ ರಾಜ್ಯ ಕ್ರಿಕೆಟ್‌ ಅಸೋಸಿಯೇಷನ್‌, ಕ್ರಿಕೆಟ್‌ ಅಸೋಸಿಯೇಷನ್‌ ಫಾರ್‌ ದಿ ಬ್ಲೈಂಡ್‌ ಸಹಯೋಗದಲ್ಲಿ ಆಯೋಜಿಸಿರುವ ಟೂರ್ನಿ ವೀಕ್ಷಿಸಲು ಜಿಲ್ಲೆಯ ವಿವಿಧೆಡೆಯಿಂದ ಕ್ರೀಡಾಸಕ್ತರು ಬರುತ್ತಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.