
ಪ್ರಜಾವಾಣಿ ವಾರ್ತೆ
ಬೆಳಗಾವಿ: ‘ಕೃಷಿ ಕ್ಷೇತ್ರದಲ್ಲಿ ವಿಪುಲವಾದ ಅವಕಾಶಗಳಿವೆ. ಯುವಜನರು ಕೃಷಿಯನ್ನು ವೃತ್ತಿಯಾಗಿ ಸ್ವೀಕರಿಸಬೇಕು’ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಸಲಹೆ ನೀಡಿದರು.
ಯರಗಟ್ಟಿ ಬಳಿಯ ತೆನಿಕೊಳ್ಳದ ಕೆಎಲ್ಇ ಸಂಸ್ಥೆಯ ಕೃಷಿ ಮಹಾವಿದ್ಯಾಲಯದಲ್ಲಿ ಶುಕ್ರವಾರ ಆಯೋಜಿಸಿದ್ದ ‘ಕೃಷಿ ಉನ್ನತಿ’ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳೊಂದಿಗೆ ಅವರು ಸಂವಾದ ನಡೆಸಿದರು.
‘ರಾಜ್ಯ ಸರ್ಕಾರ ಜಾರಿಗೊಳಿಸಿದ ವಿವಿಧ ಯೋಜನೆಗಳು ರೈತರಿಗೆ ಸಾಮಾಜಿಕ ಮತ್ತು ಆರ್ಥಿಕ ಬಲ ನೀಡುತ್ತಿವೆ’ ಎಂದರು.
ಅಧ್ಯಕ್ಷತೆ ವಹಿಸಿದ್ದ ಕೆಎಲ್‌ಇ ಸಂಸ್ಥೆಯ ನಿರ್ದೇಶಕ ಮಹಾಂತೇಶ ಕವಟಗಿಮಠ, ‘ಈ ಕೃಷಿ ಮಹಾವಿದ್ಯಾಲಯ ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ಅವರ ಕನಸಿನ ಕೂಸು. ದಕ್ಷಿಣ ಭಾರತದಲ್ಲೇ ಮನ್ನಣೆ ಗಳಿಸಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಶಾಸಕ ಮಹಾಂತೇಶ ಕೌಜಲಗಿ, ‘ಈ ಕಾಲೇಜಿನಲ್ಲಿ ಕೃಷಿ ಹಿನ್ನೆಲೆ ಹೊಂದಿದ ವಿದ್ಯಾರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗಿದೆ’ ಎಂದು ತಿಳಿಸಿದರು.
ಕೆಎಲ್ಇ ಸಂಸ್ಥೆಯ ನಿರ್ದೇಶಕ ಬಿ.ಆರ್.ಪಾಟೀಲ, ಕೃಷಿ ಇಲಾಖೆ ಜಂಟಿನಿರ್ದೇಶಕ ಎಚ್.ಡಿ.ಕೋಳೇಕರ, ಮತ್ತಿಕೊಪ್ಪದ ಕೆಎಲ್‌ಇ ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಮಂಜುನಾಥ ಚೌರಡ್ಡಿ, ಶಿವಾನಂದ ಗೌಡ್ರ, ಎ.ಬಿ.ಪಾಟೀಲ, ಜಯಾನಂದ ಮುನವಳ್ಳಿ, ವಿಶ್ವನಾಥ ಪಾಟೀಲ ಉಪಸ್ಥಿತರಿದ್ದರು.
ಪೃಥ್ವಿ ಹೆಗ್ಡೆ ಸ್ವಾಗತಿಸಿದರು. ಬಾಳೇಶ ಗೌಡಪ್ಪನವರ ನಿರೂಪಿಸಿದರು. ಸೌರಭ ಮುನ್ನೋಳಿ ವಂದಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.