ADVERTISEMENT

ಬೆಳಗಾವಿ: ಚನ್ನಮ್ಮನ ಕಿತ್ತೂರು ಉತ್ಸವ- ಕನ್ನಡ ಸಂಘಟನೆಗಳಿಂದ ಗೌರವ

​ಪ್ರಜಾವಾಣಿ ವಾರ್ತೆ
Published 23 ಅಕ್ಟೋಬರ್ 2021, 8:42 IST
Last Updated 23 ಅಕ್ಟೋಬರ್ 2021, 8:42 IST
ಕಿತ್ತೂರು ಉತ್ಸವ ಅಂಗವಾಗಿ ಕನ್ನಡ ಪರ ಸಂಘಟನೆಗಳ ಮುಖಂಡರು ಬೆಳಗಾವಿಯಲ್ಲಿ ರಾಣಿ ಚನ್ನಮ್ಮ ಪ್ರತಿಮೆಗೆ ಶನಿವಾರ ಮಾಲಾರ್ಪಣೆ ಮಾಡಿದರು
ಕಿತ್ತೂರು ಉತ್ಸವ ಅಂಗವಾಗಿ ಕನ್ನಡ ಪರ ಸಂಘಟನೆಗಳ ಮುಖಂಡರು ಬೆಳಗಾವಿಯಲ್ಲಿ ರಾಣಿ ಚನ್ನಮ್ಮ ಪ್ರತಿಮೆಗೆ ಶನಿವಾರ ಮಾಲಾರ್ಪಣೆ ಮಾಡಿದರು   

ಬೆಳಗಾವಿ: ಚನ್ನಮ್ಮನ ಕಿತ್ತೂರು ಉತ್ಸವ ಅಂಗವಾಗಿ ಕನ್ನಡಪರ ಸಂಘಟನೆಗಳ ಮುಖಂಡರು ನಗರದಲ್ಲಿ ರಾಣಿ ಚನ್ನಮ್ಮ ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಿ, ಗೌರವ ಸಲ್ಲಿಸಿದರು. ನೆರೆದಿದ್ದವರಿಗೆ ಸಿಹಿ ಹಂಚಿದರು.

ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ ಮಾತನಾಡಿ, ‘ಬ್ರಿಟಿಷರ ವಿರುದ್ಧ ಮೊಟ್ಟ ಮೊದಲ ಬಾರಿಗೆ ಬಂಡಾಯದ ಕಹಳೆ ಊದಿದ ರಾಣಿ ಚನ್ನಮ್ಮ ಕೊಡುಗೆ ಅಪಾರವಾಗಿದೆ. ಮುಂಬೈ ಕರ್ನಾಟಕಕ್ಕೆ ಕಿತ್ತೂರು ಕರ್ನಾಟಕ ಎಂದು ಮರು ನಾಮಕರಣ ಮಾಡಲು ಮುಖ್ಯಮಂತ್ರಿ ಕ್ರಮ ವಹಿಸಬೇಕು’ ಎಂದು ಒತ್ತಾಯಿಸಿದರು.

ಮುಖಂಡರಾದ ರಮೇಶ ಸೊಂಟಕ್ಕಿ, ಮಹಾದೇವ ತಳವಾರ, ಮೈನೂದ್ದೀನ್ ಮಕಾನದಾರ್, ಶಂಕರ ಬಾಗೇವಾಡಿ, ಸುರೇಶ ಗವನ್ನವರ, ದೀಪಕ ಗುಡಗನಟ್ಟಿ ಮೊದಲಾದವರು ಪಾಲ್ಗೊಂಡಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.