ADVERTISEMENT

ಶಿವಾಜಿ ಪ್ರತಿಮೆ ಲೋಕಾರ್ಪಣೆ: ಶಾಸ್ತ್ರೋಕ್ತ ಕಾರ್ಯಕ್ರಮಗಳಿಗೆ ಹೆಬ್ಬಾಳಕರ ಚಾಲನೆ

​ಪ್ರಜಾವಾಣಿ ವಾರ್ತೆ
Published 4 ಮಾರ್ಚ್ 2023, 12:58 IST
Last Updated 4 ಮಾರ್ಚ್ 2023, 12:58 IST
ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ರಾಜಹಂಸಗಡ ಕೋಟೆಯಲ್ಲಿರುವ ಸಿದ್ಧೇಶ್ವರ ದೇವಸ್ಥಾನದಲ್ಲಿ ಶಿವಾಜಿ ಮಹಾರಾಜರ ಪ್ರತಿಮೆ ಪ್ರತಿಷ್ಠಾಪನೆ ಅಂಗವಾಗಿ, ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಶನಿವಾರ ವಿಶೇಷ ಪೂಜೆ ನೆರವೇರಿಸಿದರು
ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ರಾಜಹಂಸಗಡ ಕೋಟೆಯಲ್ಲಿರುವ ಸಿದ್ಧೇಶ್ವರ ದೇವಸ್ಥಾನದಲ್ಲಿ ಶಿವಾಜಿ ಮಹಾರಾಜರ ಪ್ರತಿಮೆ ಪ್ರತಿಷ್ಠಾಪನೆ ಅಂಗವಾಗಿ, ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಶನಿವಾರ ವಿಶೇಷ ಪೂಜೆ ನೆರವೇರಿಸಿದರು   

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ, ಐತಿಹಾಸಿಕ ರಾಜಹಂಸಗಡ ಕೋಟೆಯ ಆವರಣದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಬೃಹತ್ ಪ್ರತಿಮೆ ಲೋಕಾರ್ಪಣೆ ಅಂಗವಾಗಿ ಶನಿವಾರ, ಕ್ಷೇತ್ರಪಾಲಕ ಸಿದ್ಧೇಶ್ವರ ದೇವರಿಗೆ ವಿಶೇಷ ಪೂಜೆ, ಹೋಮ, ಹವನ, ಅಭಿಷೇಕ ಸೇರಿದಂತೆ ಶಾಸ್ತ್ರೋಕ್ತ ವಿಧಾನಗಳನ್ನು ನೆರವೇರಿಸಲಾಯಿತು.

ಶಾಸಕಿ ಲಕ್ಷ್ಮೀ ಹೆಬ್ಬಾಳಕರ, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಮೃಣಾಲ್‌ ಹೆಬ್ಬಾಳಕರ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು.

‘ಭಾನುವಾರ ಬೆಳಿಗ್ಗೆ 9 ಗಂಟೆಯಿಂದ ವಿವಿಧ ಕಾರ್ಯಕ್ರಮಗಳು ಆರಂಭವಾಗಲಿವೆ. ಪಲ್ಲಕ್ಕಿ ಉತ್ಸವ, ಸಾಂಪ್ರದಾಯಿಕ ಕಾರ್ಯಕ್ರಮಗಳು ನಡೆಯಲಿವೆ. 10 ಗಂಟೆಗೆ ದೇವಸ್ಥಾನ ಪ್ರವೇಶವಾಗಲಿದೆ. 10.30ರಿಂದ ಧ್ವಜಾರೋಹಣ, ಉತ್ಸವ ಮೂರ್ತಿ ಪೂಜಾ, ಡೋಲ್ ತಾಶಾದೊಂದಿಗೆ ಮೂರ್ತಿ ಉದ್ಘಾಟನೆಯಾಗಲಿದೆ. ಕರ್ನಾಟಕ ಹಾಗೂ ಮಹಾರಾಷ್ಟ್ರದ ಹಲವಾರು ಗಣ್ಯರಿಗೆ ಕಾರ್ಯಕ್ರಮಕ್ಕೆ ಆಹ್ವಾನ ನೀಡಲಾಗಿದೆ. ಬೆಳಿಗ್ಗೆಯಿಂದ ರಾತ್ರಿಯವರೆಗೆ ನಡೆಯುವ ಕಾರ್ಯಕ್ರಮದಲ್ಲಿ ಒಟ್ಟಾರೆ ಲಕ್ಷಕ್ಕೂ ಹೆಚ್ಚು ಜನರು ಪಾಲ್ಗೊಳ್ಳುವ ನಿರೀಕ್ಷೆ ಇದೆ’ ಎಂದು ಶಾಸಕಿ ಹೆಬ್ಬಾಳಕರ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.