ADVERTISEMENT

ಚಿಕ್ಕೋಡಿ- ಸದಲಗಾ ಮಾದರಿ ಕ್ಷೇತ್ರ: ಚಿದ್ಗನಾನಂದ ಸ್ವಾಮೀಜಿ

​ಪ್ರಜಾವಾಣಿ ವಾರ್ತೆ
Published 26 ಜುಲೈ 2025, 2:39 IST
Last Updated 26 ಜುಲೈ 2025, 2:39 IST
ಚಿಕ್ಕೋಡಿ ಪಟ್ಟಣದ ಪರಟಿ ನಾಗಲಿಂಗೇಶ್ವರ ಸಭಾಭವನದಲ್ಲಿ ಶಾಸಕ ಗಣೇಶ ಹುಕ್ಕೇರಿ ಅವರ 47ನೇ ಹುಟ್ಟುಹಬ್ಬದ ಅಂಗವಾಗಿ ಹಮ್ಮಿಕೊಂಡ ಕಾರ್ಯಕ್ರಮವನ್ನು ಪ್ರಕಾಶ ಹುಕ್ಕೇರಿ ಉದ್ಘಾಟಿಸಿದರು. ಸಂಪಾದನಾ ಸ್ವಾಮೀಜಿ, ಚಿದ್ಗನಾನಂದ ಸ್ವಾಮೀಜಿ, ಸೋನಾಕ್ಷಿ ಹುಕ್ಕೇರಿ, ಅದ್ವಿಕ ಹುಕ್ಕೇರಿ ಇತರರು ಪಾಲ್ಗೊಂಡರು
ಚಿಕ್ಕೋಡಿ ಪಟ್ಟಣದ ಪರಟಿ ನಾಗಲಿಂಗೇಶ್ವರ ಸಭಾಭವನದಲ್ಲಿ ಶಾಸಕ ಗಣೇಶ ಹುಕ್ಕೇರಿ ಅವರ 47ನೇ ಹುಟ್ಟುಹಬ್ಬದ ಅಂಗವಾಗಿ ಹಮ್ಮಿಕೊಂಡ ಕಾರ್ಯಕ್ರಮವನ್ನು ಪ್ರಕಾಶ ಹುಕ್ಕೇರಿ ಉದ್ಘಾಟಿಸಿದರು. ಸಂಪಾದನಾ ಸ್ವಾಮೀಜಿ, ಚಿದ್ಗನಾನಂದ ಸ್ವಾಮೀಜಿ, ಸೋನಾಕ್ಷಿ ಹುಕ್ಕೇರಿ, ಅದ್ವಿಕ ಹುಕ್ಕೇರಿ ಇತರರು ಪಾಲ್ಗೊಂಡರು   

ಚಿಕ್ಕೋಡಿ: ‘ರಾಜ್ಯದ ನಾನಾ ಕ್ಷೇತ್ರಗಳಲ್ಲಿ ನಾನು ತಿರುಗಾಡಿದ್ದು, ಇತರೆಡೆಗಿಂತ ಚಿಕ್ಕೋಡಿ– ಸದಲಗಾ ವಿಧಾನಸಭಾ ಕ್ಷೇತ್ರದಲ್ಲಿ ಹೆಚ್ಚಿನ ಅಭಿವೃದ್ಧಿ ಕಂಡಿದ್ದೇನೆ. ಇದಕ್ಕೆ ಶಾಸಕ ಗಣೇಶ ಹುಕ್ಕೇರಿ ಹಾಗೂ ವಿಧಾನ ಪರಿಷತ್ ಸದಸ್ಯ ಪ್ರಕಾಶ ಹುಕ್ಕೇರಿ ಅವರ ನಿರಂತರ ಪ್ರಯತ್ನವೇ ಕಾರಣ’ ಎಂದು ಜೋಡಕುರಳಿಯ ಸಿದ್ದಾರೂಢ ಮಠದ ಚಿದ್ಗನಾನಂದ ಸ್ವಾಮೀಜಿ ಹೇಳಿದರು.

ಪಟ್ಟಣದ ಪರಟಿ ನಾಗಲಿಂಗೇಶ್ವರ ಸಭಾಭವನದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಶಾಸಕ ಗಣೇಶ ಹುಕ್ಕೇರಿ ಅವರ 47ನೇ ಜನ್ಮದಿನದ ಅಂಗವಾಗಿ ವಿವಿಧ ಸರ್ಕಾರಿ ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣಾ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿದರು.

‘ಸಾಧನೆ ಮಾತನಾಡಬೇಕು. ಮಾತನಾಡುವುದೇ ಸಾಧನೆ ಆಗಬಾರದು. ಅವರು ಮಾತನಾಡುವುದಕ್ಕಿಂತ ಅವರ ಕೆಲಸ ಮಾತನಾಡಬೇಕು. ಆಗಲೇ ಜನರ ಮೆಚ್ಚುಗೆಗೆ ಪಾತ್ರರಾಗಲು ಸಾಧ್ಯ. ಇಂತಹ ಕಾರ್ಯವನ್ನು ತಂದೆ ಪ್ರಕಾಶ ಹುಕ್ಕೇರಿ ಹಾಗೂ ಅವರ ಪುತ್ರ ಗಣೇಶ ಹುಕ್ಕೇರಿ ಮಾಡುತ್ತಿರುವುದು ಹೆಮ್ಮೆಯ ವಿಷಯ’ ಎಂದರು.

ADVERTISEMENT

ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ಸರ್ಕಾರದ ದೆಹಲಿಯ ವಿಶೇಷ ಪ್ರತಿನಿಧಿ, ವಿಧಾನಪರಿಷತ್ ಸದಸ್ಯ ಪ್ರಕಾಶ ಹುಕ್ಕೇರಿ ಮಾತನಾಡಿ, ‘ಕ್ಷೇತ್ರ ವ್ಯಾಪ್ತಿಯಲ್ಲಿ ಶಾಸಕ ಗಣೇಶ ಹುಕ್ಕೇರಿ ನೀರಾವರಿಗೆ ಹೆಚ್ಚಿನ ಆದ್ಯತೆ ನೀಡಿದ್ದು, ₹382 ಕೋಟಿ ವೆಚ್ಚದಲ್ಲಿ ಮಹಾಲಕ್ಷ್ಮೀ ಏತ ನೀರಾವರಿ ಯೋಜನೆ ಕಾಮಗಾರಿ ಪ್ರಗತಿಯಲ್ಲಿದೆ. ಚಿಕ್ಕೋಡಿ ಉಪ ಕಾಲುವೆಯ ಮೂಲಕ ₹ 144 ಕೋಟಿ ಅನುದಾನದಲ್ಲಿ 32 ಸಾವಿರ ಎಕರೆ ಜಮೀನಿಗೆ ನೀರು ಹರಿಯಲಿದೆ. ₹ 210 ಕೋಟಿ ಮೊತ್ತದಲ್ಲಿ ರಾಯಬಾಗ ಉನ್ನತಮಟ್ಟದ (ಆರ್.ಎಚ್.ಎಲ್.ಡಿ) ಕಾಲುವೆಗಳ ಮೂಲಕ ಚಿಕ್ಕೋಡಿ ತಾಲ್ಲೂಕಿನ 18 ಸಾವಿರ ಹಾಗೂ ರಾಯಬಾಗ ತಾಲ್ಲೂಕಿನ 6 ಸಾವಿರ ಎಕರೆ ಪ್ರದೇಶ ನೀರಾವರಿಗೆ ಒಳಪಡಲಿದೆ’ ಎಂದು ಹೇಳಿದರು.

ಈ ಸಂದರ್ಭದಲ್ಲಿ ಚಿಕ್ಕೋಡಿ ತಾಲ್ಲೂಕು ವ್ಯಾಪ್ತಿಯ ವಿವಿಧ ಸರ್ಕಾರಿ ಪ್ರೌಢಶಾಲೆ ಹಾಗೂ ಸರ್ಕಾರಿ ಪಿಯು ಕಾಲೇಜಿನ ಹಲವು ವಿದ್ಯಾರ್ಥಿಗಳಿಗೆ ಬ್ಯಾಗುಗಳನ್ನು ವಿತರಣೆ ಮಾಡಲಾಯಿತು. ಬ್ಯಾಗ್ ಸ್ವೀಕರಿಸಿದ ವಿದ್ಯಾರ್ಥಿಗಳು ತಮ್ಮ ಅನಿಸಿಕೆ ವ್ಯಕ್ತಪಡಿಸಿದರು.

ಸಾನ್ನಿಧ್ಯ ವಹಿಸಿದ್ದ ಚಿಕ್ಕೋಡಿಯ ಚರಮೂರ್ತಿ ಮಠದ ಸಂಪಾದನಾ ಸ್ವಾಮೀಜಿ ಮಾತನಾಡಿ, ‘ಜನನ ಹಾಗೂ ಮರಣದ ನಡುವಿನ ಬದುಕು ಆದರ್ಶಮಯವಾಗಿರಬೇಕು. ಅನಾರೋಗ್ಯದಿಂದ ಬಳಲುತ್ತಿದ್ದರೂ ಪ್ರಕಾಶ ಹುಕ್ಕೇರಿ ಅವರು ಜನರ ಕಷ್ಟಕ್ಕೆ ನೆರವಾಗುವ ಕೆಲಸಗಳನ್ನು ಮಾಡುತ್ತಿದ್ದಾರೆ’ ಎಂದರು.

ತಹಶೀಲ್ದಾರ ಚಿದಂಬರ ಕುಲಕರ್ಣಿ, ಡಿಡಿಪಿಯು ಪಾಂಡುರಂಗ ಭಂಡಾರಿ, ಡಿಡಿಪಿಐ ಆರ್.ಎಸ್. ಸೀತಾರಾಮು, ಮುಖಂಡರಾದ ಅನಿಲ ಮಾನೆ, ಎಸ್.ಎಸ್. ಕೌಲಾಪೂರ, ರಾಮಾ ಮಾನೆ, ಅನಿಲ ಪಾಟೀಲ, ಅದ್ವಿಕ ಹುಕ್ಕೇರಿ, ಸೋನಾಕ್ಷಿ ಹುಕ್ಕೇರಿ, ಚಿಕ್ಕೋಡಿ ಪುರಸಭೆ ಉಪಾಧ್ಯಕ್ಷ ಇರ್ಫಾನ್ ಬೇಪಾರಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲ್ಲೂಕು ಅಧ್ಯಕ್ಷ ರಮೇಶ ಪಾಟೀಲ, ಯಕ್ಸಂಬಾ ಪಟ್ಟಣ ಪಂಚಾಯಿತಿ ಅಧ್ಯಕ್ಷ ಸುನೀಲ ಸಪ್ತಸಾಗರ, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಸುರೇಶ ಚೌಗಲಾ, ವರ್ಧಮಾನ ಸದಲಗೆ, ಮಲ್ಲಿಕಾರ್ಜುನ ಪಾಟೀಲ, ನಿಂಬಾಳಕರ ಸರ್ಕಾರ, ಬಿಇಒ ಪ್ರಭಾವತಿ ಪಾಟೀಲ, ಸದಲಗಾ ಪುರಸಭೆ ಅಧ್ಯಕ್ಷ ರಾಜು ಗುಂಡಕಲ್ಲೆ ಇತರರು ಇದ್ದರು.

ಚಿಕ್ಕೋಡಿ ಪಟ್ಟಣದ ಪರಟಿ ನಾಗಲಿಂಗೇಶ್ವರ ಸಭಾಭವನದಲ್ಲಿ ಶಾಸಕ ಗಣೇಶ ಹುಕ್ಕೇರಿ ಅವರ 47ನೇ ಜನ್ಮದಿನಾಚರಣೆ ನಿಮಿತ್ಯವಾಗಿ ತಾಲ್ಲೂಕಿನ ವಿವಿಧ ಸರ್ಕಾರಿ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಬ್ಯಾಗ್ ಗಳನ್ನು ವಿತರಣೆ ಮಾಡಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.