ಬೆಳಗಾವಿ: 'ಬಿ.ಎಸ್. ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಬದಲಾಯಿಸುವ ಪ್ರಶ್ನೆಯೇ ಇಲ್ಲ. ಈ ವಿಚಾರದಲ್ಲಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಭ್ರಮೆಯಲ್ಲಿದ್ದಾರೆ' ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದರು.
ಇಲ್ಲಿ ಶುಕ್ರವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು.
'ಮಾಜಿ ಸಚಿವ ವಿನಯ ಕುಲಕರ್ಣಿ ಅವರು ತಪ್ಪು ಮಾಡಿಲ್ಲ ಎಂದಾದರೆ ಕಾನೂನು ಹೋರಾಟ ಮಾಡಿ ಗೆದ್ದು ಬರಲಿ. ಈ ಪ್ರಕರಣ ವಿಚಾರಣೆ ಹಂತದಲ್ಲಿ ಇರುವುದರಿಂದ ಹೆಚ್ಚು ಮಾತನಾಡುವುದಿಲ್ಲ' ಎಂದು ಹೇಳಿದರು.
'ಮಾಜಿ ಶಾಸಕ ಅರವಿಂದ ಪಾಟೀಲ ಅವರನ್ನು ಸೂಕ್ತ ಸಮಯದಲ್ಲಿ ಬಿಜೆಪಿಗೆ ಸೇರಿಸಿಕೊಳ್ಳಲಾಗುವುದು ಎಂದು ಸಂದರ್ಭದ ಅನುಸಾರವಾಗಿ ಹೇಳಿದ್ದೆ. ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುವುದು, ಬಿಡುವುದು ಪಕ್ಷದ ವರಿಷ್ಠರಿಗೆ ಬಿಟ್ಟ ವಿಷಯ' ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.