ADVERTISEMENT

ಪ್ರವಾಹದಿಂದ ಹಾನಿ: ಎಲ್ಲೆಲ್ಲಿಗೆ ಮುಖ್ಯಮಂತ್ರಿ ಭೇಟಿ?

​ಪ್ರಜಾವಾಣಿ ವಾರ್ತೆ
Published 24 ಜುಲೈ 2021, 15:40 IST
Last Updated 24 ಜುಲೈ 2021, 15:40 IST
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ   

ಬೆಳಗಾವಿ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಜುಲೈ 25ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದು, ಪ್ರವಾಹ ಹಾಗೂ ಅತಿವೃಷ್ಟಿಯಿಂದ ಆಗಿರುವ ಹಾನಿಯನ್ನು ಪರಿಶೀಲಿಸಲಿದ್ದಾರೆ.

ಬೆಳಿಗ್ಗೆ 10.15ಕ್ಕೆ ವಿಶೇಷ ವಿಮಾನದಲ್ಲಿ ಸಾಂಬ್ರಾಕ್ಕೆ ಬರುವ ಅವರು, ಹುಕ್ಕೇರಿ ತಾಲ್ಲೂಕಿನ ಸಂಕೇಶ್ವರದಲ್ಲಿ ಮಠ ಗಲ್ಲಿ, ಕುಂಬಾರ ಓಣಿ, ನದಿ ಗಲ್ಲಿಗಳಲ್ಲಿ ಮುಳುಗಡೆ ಪ್ರದೇಶಗಳನ್ನು ವೀಕ್ಷಿಸುವರು. ಶಂಕರಲಿಂಗ ಕಾರ್ಯಾಲಯದಲ್ಲಿ ಕಾಳಜಿ ಕೇಂದ್ರದಲ್ಲಿ ಆಶ್ರಯ ಪಡೆದಿರುವ ಸಂತ್ರಸ್ತರನ್ನು ಭೇಟಿಯಾಗುವರು. ಬಳಿಕ ನಿಪ್ಪಾಣಿ ತಾಲ್ಲೂಕಿನ ಯಮಗರ್ಣಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಮುಳುಗಡೆ ಆಗಿರುವುದನ್ನು ವೀಕ್ಷಿಸುವರು. ಗಂಡು ಮಕ್ಕಳ ಸರ್ಕಾರಿ ಶಾಲೆಯ ಕಾಳಜಿ ಕೇಂದ್ರಕ್ಕೆ ಭೇಟಿ ನೀಡುವರು.

ಮಧ್ಯಾಹ್ನ 12.20ಕ್ಕೆ ನಿಪ್ಪಾಣಿ ತಾಲ್ಲೂಕಿನ ಕೋಡ್ನಿ ಗ್ರಾಮದಲ್ಲಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳನ್ನು ವೀಕ್ಷಿಸುವರು. ಮಧ್ಯಾಹ್ನ 2.30ಕ್ಕೆ ಪ್ರವಾಸಿ ಮಂದಿರದಲ್ಲಿ ಪರಿಹಾರ ಕಾರ್ಯಗಳ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ, ಜನಪ್ರತಿನಿಧಿಗಳು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸುವರು. ಸಂಜೆ 4ಕ್ಕೆ ಸಾಂಬ್ರಾ ವಿಮಾನನಿಲ್ದಾಣದಿಂದ ತೆರಳುವರು ಎಂದು ಪ್ರಕಟಣೆ ತಿಳಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.