ADVERTISEMENT

ಸಂಜೀವ ಸಣ್ಣಕ್ಕಿಗೆ ಮುಖ್ಯಮಂತ್ರಿ ಚಿನ್ನದ ಪದಕ 

​ಪ್ರಜಾವಾಣಿ ವಾರ್ತೆ
Published 22 ಮಾರ್ಚ್ 2025, 16:22 IST
Last Updated 22 ಮಾರ್ಚ್ 2025, 16:22 IST
 ಸಂಜೀವ ಸಣ್ಣಕ್ಕಿ
 ಸಂಜೀವ ಸಣ್ಣಕ್ಕಿ   

ಮೂಡಲಗಿ: ಪೊಲೀಸ್‌ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಮೂಡಗಿಯ ಸಂಜೀವ ಸುರೇಶ ಸಣ್ಣಕ್ಕಿ ಅವರಿಗೆ 2023ನೇ ಸಾಲಿನ ಮುಖ್ಯಮಂತ್ರಿ ಚಿನ್ನದ ಪದಕಕ್ಕೆ ಭಾಜನರಾಗಿದ್ದಾರೆ.

ಏಪ್ರಿಲ್‌ 2ರಂದು ಬೆಂಗಳೂರಿನಲ್ಲಿ ನಡೆಯುವ ಪೊಲೀಸ್‌ ಧ್ವಜ ದಿನಾಚರಣೆಯಂದು ಮುಖ್ಯಮಂತ್ರಿಗಳು ಚಿನ್ನದ ಪದಕ ಪ್ರದಾನ ಮಾಡಲಿದ್ದಾರೆ. 2023ರಲ್ಲಿ ಮಧ್ಯಪ್ರದೇಶದ ಭೂಪಾಲನಲ್ಲಿ ನಡೆದ 66ನೇ ಅಖಿಲ ಭಾರತ ಪೊಲೀಸ್ ಕರ್ತವ್ಯ ಕೂಟದಲ್ಲಿ ಮಾದಕ ವಸ್ತು ಪತ್ತೆ ವಿಭಾಗದಲ್ಲಿ ಸ್ಪರ್ಧಿಸಿ ಬೆಳ್ಳಿ ಪದಕ ಮತ್ತು ₹2 ಲಕ್ಷ ನಗದು ಬಹಮಾನವನ್ನು ಪಡೆದುಕೊಂಡಿರುವ ಹೆಗ್ಗಳಿಕೆ ಇವರದಾಗಿದೆ.

ಕಳೆದ 12 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಸಂಜೀವ ಸಣ್ಣಕ್ಕಿ ಸದ್ಯ ಬೆಂಗಳೂರಿನ ಆಡುಗೋಡಿಯ ಪೊಲೀಸ್‌ ಠಾಣೆಯಲ್ಲಿ ಹೆಡ್‌ ಕಾನ್ಸ್‌ಟೇಬಲ್‌ ಎಂದು ಸೇವೆ ಸಲ್ಲಿಸುತ್ತಿದ್ದಾರೆ. ಇಲಾಖೆಯಲ್ಲಿ ಸಲ್ಲಿಸಿರುವ ಅತ್ಯುತ್ತಮ ಸೇವೆಯನ್ನು ಪರಿಗಣಿಸಿ ಪ್ರಶಸ್ತಿಯನ್ನು ನೀಡುತ್ತಿರುವರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.