ADVERTISEMENT

ಬೆಳಗಾವಿ: ’ಚಿಗುರು’ ಕಾರ್ಯಕ್ರಮಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಚಾಲನೆ

​ಪ್ರಜಾವಾಣಿ ವಾರ್ತೆ
Published 9 ಸೆಪ್ಟೆಂಬರ್ 2025, 15:22 IST
Last Updated 9 ಸೆಪ್ಟೆಂಬರ್ 2025, 15:22 IST
   

ಬೆಳಗಾವಿ: ತೀವ್ರ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳ ನಿರ್ವಹಣೆಯ ಯೋಜನೆಯಾದ ‘ಚಿಗುರು’ ಕಾರ್ಯಕ್ರಮಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಇಲ್ಲಿ ಮಂಗಳವಾರ ಚಾಲನೆ ನೀಡಿದರು.

‘ಮಕ್ಕಳ ಅಪೌಷ್ಟಿಕತೆ ನಿವಾರಣೆಗಾಗಿ ರೂಪಿಸಿದ ಇಲಾಖೆಯ ಮಹತ್ವದ ಕಾರ್ಯಕ್ರಮಗಳಲ್ಲಿ ಇದು ಒಂದಾಗಿದೆ. ಬಳ್ಳಾರಿ, ಬೀದರ್‌, ಕಲಬುರಗಿ, ಯಾದಗಿರಿ, ಬೆಳಗಾವಿ, ರಾಯಚೂರು, ಚಿತ್ರದುರ್ಗ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಯೋಜನೆ ಅನುಷ್ಠಾನಕ್ಕೆ ಯೋಜಿಸಲಾಗಿದೆ’ ಎಂದರು.

‘ಈ ಯೋಜನೆಯಡಿ ವೈದ್ಯಕೀಯ ಸಮಸ್ಯೆಗಳಿರದ ತೀವ್ರ ಮತ್ತು ಸಾಧಾರಣ ಅಪೌಷ್ಟಿಕ ಮಕ್ಕಳಿಗೆ ವೈದ್ಯಕೀಯ ಪೂರಕ ಅಂಶಗಳು, ಹೆಚ್ಚು ಪೋಷಕಾಂಶಯುಕ್ತ ಪೌಷ್ಟಿಕ ಆಹಾರ ನೀಡಲಾಗುತ್ತದೆ. ಯುನಿಸೆಫ್‌ ಕೂಡ ಈ ಯೋಜನೆಯಲ್ಲಿ ಸಹಭಾಗಿಯಾಗಿದ್ದು, ಯುನಿಸೆಫ್‌ ವತಿಯಿಂದ ಎಂಟು ಜಿಲ್ಲೆಗಳ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಮೇಲ್ವಿಚಾರಕಿಯರಿಗೆ ಪ್ರಾಥಮಿಕ ಹಂತದ ತರಬೇತಿ ನೀಡಲಾಗುವುದು’ ಎಂದರು.

ADVERTISEMENT

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿ ಶಾಮಲಾ ಇಕ್ಬಾಲ್‌, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನಿರ್ದೇಶಕ ಮಹೇಶಬಾಬು, ಅಂಗವಿಕಲರು ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ನಿರ್ದೇಶಕ ರಾಘವೇಂದ್ರ ಇತರರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.