ಚಿಕ್ಕೋಡಿ: ‘ಪದಾಧಿಕಾರಿಗಳ ನೇಮಕದೊಂದಿಗೆ ಪಕ್ಷಕ್ಕೆ ದುಡಿಯುವ ಕಾರ್ಯಕರ್ತರ ಪಡೆ ರಚಿಸುವುದೇ ಕಾಂಗ್ರೆಸ್ ಪ್ರಚಾರ ಸಮಿತಿಯ ಉದ್ದೇಶವಾಗಿದೆ’ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿ ರಾಜ್ಯ ಘಟಕದ ಅಧ್ಯಕ್ಷ ವಿನಯಕುಮಾರ ಸೊರಕೆ ಹೇಳಿದರು.
ಪಟ್ಟಣದ ಲೋಕೋಪಯೋಗಿ ಸಭಾಭವನದಲ್ಲಿ ಬುಧವಾರ ಆಯೋಜಿಸಿದ ಚಿಕ್ಕೋಡಿ ಜಿಲ್ಲಾ ಮಟ್ಟದ ಕಾಂಗ್ರೆಸ್ ಪಕ್ಷದ ಪದಾಧಿಕಾರಿಗಳ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.
‘ಮುಂಬರುವ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿ ಚುನಾವಣೆಗಳನ್ನು ಸಮರ್ಥವಾಗಿ ಎದುರಿಸಲು ಈಗಿನಿಂದಲೇ ಪಕ್ಷ ಮುಂದಡಿ ಇಟ್ಟಿದೆ. ಸಾಮಾಜಿಕ ಕಳಕಳಿ ಹೊಂದಿರುವ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳೇ ಚುನಾವಣೆ ಗೆಲ್ಲಲು ಆಧಾರವಾಗಿದೆ’ ಎಂದರು.
ಪ್ರಚಾರ ಸಮಿತಿಯ ರಾಜ್ಯ ಉಪಾಧ್ಯಕ್ಷ ಮುನೀರ ಜನಸಾಲಿ ಮಾತನಾಡಿ, ‘ರಾಜ್ಯ ಹಾಗೂ ರಾಷ್ಟ್ರ ಮಟ್ಟದ ನಾಯಕರನ್ನು ಹುಟ್ಟು ಹಾಕುವವರೇ ಬೂತ್ ಮಟ್ಟದ ಕಾರ್ಯಕರ್ತರು. ಹಾಗಾಗಿ ಬೂತ್ ಮಟ್ಟದ ಕಾರ್ಯಕರ್ತರ ಜವಾಬ್ದಾರಿಯು ಮಹತ್ತರವಾಗಿದೆ’ ಎಂದು ಹೇಳಿದರು.
ಸಭೆಯನ್ನು ಉದ್ದೇಶಿಸಿ ಕಾಂಗ್ರೆಸ್ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಹುಲ್ ಜಾರಕಿಹೊಳಿ, ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
ಸಭೆಯಲ್ಲಿ ಮುಖಂಡರಾದ ಮಲ್ಲಿಕಾರ್ಜುನ ರಾಶಿಂಗೆ, ಸಿದಿಕ್ ಅಂಕಲಗಿ, ಸಂತೋಷ ಮುಡಸಿ, ನಿರ್ಮಲಾ ಪಾಟೀಲ, ರಮೇಶ ಪಾಟೀಲ, ಶರಣಪ್ಪ ಕೊಟಗಿ, ಪ್ರಭಾಕರ ಕೋರೆ, ಸಾಬೀರ ಜಮಾದಾರ, ಗುಲಾಬಹುಸೇನ್ ಬಾಗವಾನ, ರವಿ ಪಾಟೀಲ, ರಾಮಕೃಷ್ಣ ಪಾನಬುಡೆ, ಸತೀಶ ಕುಲಕರ್ಣಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.