
ಚಿಕ್ಕೋಡಿ: ಶೈಕ್ಷಣಿಕ ಜಿಲ್ಲೆ, ಕಂದಾಯ ಉಪವಿಭಾಗ ಸ್ಥಾನ ಮಾನ ಹೊಂದಿರುವ ಚಿಕ್ಕೋಡಿ, ಜಿಲ್ಲೆಯಾಗಿ ಘೋಷಣೆಯಾಗಬೇಕಿದೆ. ಘೋಷಣೆಯಾದಲ್ಲಿ ಸ್ಥಳೀಯ ಜನರ 4 ದಶಕಗಳ ಬೇಡಿಕೆ ಈಡೇರಿದಂತಾಗುತ್ತದೆ.
₹ 567 ಕೋಟಿ ಮೊತ್ತದ ಮಹಾಲಕ್ಷ್ಮೀ ಏತ ನೀರಾವರಿ ಯೋಜನೆಯ ಮೊದಲ ಹಂತದ ಕಾಮಗಾರಿ ಮುಕ್ತಾಯ ಹಂತದಲ್ಲಿದೆ. 2ನೇ ಹಂತದ ಕಾಮಗಾರಿಗೆ ₹ 179.30 ಕೋಟಿ ಅನುದಾನ ಅವಶ್ಯಕತೆ ಇದೆ. ₹ 100 ಕೋಟಿ ಮೊತ್ತದಲ್ಲಿ ಪ್ರಾರಂಭವಾದ ಕರಗಾಂವ ಏತ ನೀರಾವರಿ ಯೋಜನೆ ಮೊದಲ ಹಂತದ ಕಾಮಗಾರಿ ಪ್ರಗತಿಯಲ್ಲಿದ್ದು, ಹನುಮಾನ ಏತ ನೀರಾವರಿ ಯೋಜನೆಗೆ ₹ 445 ಕೋಟಿ ವೆಚ್ಚ ಅಂದಾಜಿಸಲಾಗಿದ್ದು, ಆಡಳಿತಾತ್ಮಕ ಅನುಮೋದನೆ ದೊರೆಯಬೇಕಿದೆ.
ಇತ್ತೀಚಿನ ದಿನಗಳಲ್ಲಿ ಕ್ಯಾನ್ಸರ್ ರೋಗಿಗಳ ಸಂಖ್ಯೆ ಹೆಚ್ಚುತ್ತಿದ್ದು, ತಾಲ್ಲೂಕಿನ 2629 ರೋಗಿಗಳನ್ನು ಒಳಗೊಂಡಂತೆ ವಿಭಾಗ ವ್ಯಾಪ್ತಿಯಲ್ಲಿ ಒಟ್ಟು 8295 ಕ್ಯಾನ್ಸರ್ ರೋಗಿಗಳು ಇದ್ದಾರೆ. ಚಿಕಿತ್ಸೆಗಾಗಿ ಮಹಾರಾಷ್ಟ್ರ ರಾಜ್ಯದ ದೊಡ್ಡ ದೊಡ್ಡ ನಗರಗಳಿಗೆ ಅಲೆದಾಡುವಂತಾಗಿದೆ. ಪಟ್ಟಣದಲ್ಲಿ ಕ್ಯಾನ್ಸರ್ ಆಸ್ಪತ್ರೆ ತೆರೆಯಬೇಕೆಂಬ ಬೇಡಿಕೆ ಇದೆ.
ಪ್ರತಿ ವರ್ಷ ಪ್ರವಾಹದಿಂದ ಕೃಷ್ಣಾ ಹಾಗೂ ಉಪನದಿ ತೀರದ ಜನರ ಕಷ್ಟಕ್ಕೆ ಕೊನೆ ಇಲ್ಲದಂತಾಗಿದೆ. ತಾಲ್ಲೂಕಿನ ಕೃಷ್ಣಾ ನದಿಯ ಕಲ್ಲೋಳ-ಯಡೂರ, ಚಂದೂರ-ಟಾಕಳಿ, ಇಂಗಳಿ-ಜಲಾಲಪೂರ, ದೂಧಗಂಗಾ ನದಿಯ ಮಲಿಕವಾಡ-ದತ್ತವಾಡ, ಕಾರದಗಾ-ಭೋಜ ಬೃಹತ್ ಸೇತುವೆಗಳ ಕಾಮಗಾರಿ 7 ವರ್ಷದಿಂದ ಆಮೆಗತಿಯಲ್ಲಿದೆ. ಹೆಚ್ಚಿನ ಅನುದಾನ ನೀಡಿ ಕಾಮಗಾರಿ ಪೂರ್ಣಗೊಳಿಸಬೇಕಿದೆ.
ಚಿಕ್ಕೋಡಿ ಉಪ ವಿಭಾಗ ವ್ಯಾಪ್ತಿಯಲ್ಲಿ ಕ್ಯಾನ್ಸರ್ ರೋಗಿಗಳ ಸಂಖ್ಯೆ ಹೆಚ್ಚುತ್ತಿದ್ದು ಕ್ಯಾನ್ಸರ್ ಆಸ್ಪತ್ರೆಯೊಂದನ್ನು ತೆರಯಬೇಕು ಎಂದು ಸರ್ಕಾರವನ್ನು ಒತ್ತಾಯಿಸಲಾಗುವುದುಪ್ರಕಾಶ ಹುಕ್ಕೇರಿ ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ– 2
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.