ADVERTISEMENT

ಚಿಕ್ಕೋಡಿ: ಗ್ರಂಥಾಲಯ ಕಟ್ಟಡ, ನೀರಿನ ಘಟಕ ದುರಸ್ತಿಗೆ ಕ್ರಮ

​ಪ್ರಜಾವಾಣಿ ವಾರ್ತೆ
Published 23 ನವೆಂಬರ್ 2025, 4:18 IST
Last Updated 23 ನವೆಂಬರ್ 2025, 4:18 IST
ಚಿಕ್ಕೋಡಿ ತಾಲ್ಲೂಕಿನ ಶಿರಗಾಂವ ಗ್ರಾಮದಲ್ಲಿರುವ ಸಾರ್ವಜನಿಕ ಗ್ರಂಥಾಲಯ ಹಾಗೂ ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಭೇಟಿ ನೀಡಿ ಪರಿಶೀಲಿಸಿ ಕ್ರಮ ಕೈಗೊಳ್ಳಲು ಸ್ಥಳಕ್ಕೆ ಭೇಟಿ ನೀಡಿದ ಸಹಾಯಕ ಕಾರ್ಯಕಾರಿ ಅಭಿಯಂತರ ಬಿ ಆರ್ ಜಂಬಗೆ, ಶಿವಾನಂದ ಶಿರಗಾಂವ, ಎಸ್ ಎಸ್ ಮಠದ ಮುಂತಾದವರು ಗ್ರಾಮ ಪಂಚಾಯತಿ ಸಿಬ್ಬಂದಿಗೆ ಸೂಚಿಸಿದರು.
ಚಿಕ್ಕೋಡಿ ತಾಲ್ಲೂಕಿನ ಶಿರಗಾಂವ ಗ್ರಾಮದಲ್ಲಿರುವ ಸಾರ್ವಜನಿಕ ಗ್ರಂಥಾಲಯ ಹಾಗೂ ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಭೇಟಿ ನೀಡಿ ಪರಿಶೀಲಿಸಿ ಕ್ರಮ ಕೈಗೊಳ್ಳಲು ಸ್ಥಳಕ್ಕೆ ಭೇಟಿ ನೀಡಿದ ಸಹಾಯಕ ಕಾರ್ಯಕಾರಿ ಅಭಿಯಂತರ ಬಿ ಆರ್ ಜಂಬಗೆ, ಶಿವಾನಂದ ಶಿರಗಾಂವ, ಎಸ್ ಎಸ್ ಮಠದ ಮುಂತಾದವರು ಗ್ರಾಮ ಪಂಚಾಯತಿ ಸಿಬ್ಬಂದಿಗೆ ಸೂಚಿಸಿದರು.   

ಚಿಕ್ಕೋಡಿ: ತಾಲ್ಲೂಕಿನ ಶಿರಗಾಂವ ಗ್ರಾಮದಲ್ಲಿರುವ ಸಾರ್ವಜನಿಕ ಗ್ರಂಥಾಲಯ ಅವ್ಯವಸ್ಥೆ ಕುರಿತು ನ. 20ರಂದು ‘ಪ್ರಜಾವಾಣಿ’ಯಲ್ಲಿ ಪ್ರಕಟವಾದ ‘ಗ್ರಂಥಾಲಯ ಕಟ್ಟಡ ದುರಸ್ತಿಗೆ ನಿರ್ಲಕ್ಷ್ಯ’ ಎಂಬ ವಿಶೇಷ ವರದಿ ಪ್ರಕಟವಾದ ನಿಮಿತ್ತ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಸಮಸ್ಯೆ ನಿವಾರಣೆಗೆ ಕ್ರಮ ಕೈಗೊಂಡಿದ್ದಾರೆ.

ಚಿಕ್ಕೋಡಿ ತಾಲ್ಲೂಕಿನ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಸಹಾಯಕ ಕಾರ್ಯನಿರ್ವಾಜಕ ಎಂಜಿನಿಯರ್‌ ಬಿ.ಆರ್. ಜಂಬಗೆ, ತಾಂತ್ರಿಕ ಸಹಾಯಕ ಮಹಾಂತೇಶ ಹಿಂಗ್ಲಜೆ, ತಾಲ್ಲೂಕು ಪಂಚಾಯತಿ ಸಹಾಯಕ ನಿರ್ದೇಶಕ ಎಸ್.ಎಸ್. ಮಠದ, ನರೇಗಾ ವಿಭಾಗದ ಸಹಾಯಕ ನಿರ್ದೇಶಕ ಶಿವಾನಂದ ಶಿರಗಾಂವೆ ಭೇಟಿ ನೀಡಿ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಗ್ರಾಮ ಪಂಚಾಯತಿ ಸಿಬ್ಬಂದಿಗೆ ಸೂಚಿಸಿದರು.

ಅಧಿಕಾರಿಗಳ ಸೂಚನೆಯ ಮೇರೆಗೆ ಸಾರ್ವಜನಿಕ ಗ್ರಂಥಾಲಯ ಆವರಣದಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕದಲ್ಲಿ ಶುದ್ಧ ನೀರು ಸರಬರಾಜು ಆರಂಭಿಸಲಾಗಿದೆ. ಗ್ರಂಥಾಲಯ ಹಾಗೂ ನೀರಿನ ಘಟಕದ ಸುತ್ತಲಿನ ಪರಿಸರ ಶುಚಿಗೊಳಿಸಲಾಗಿದೆ.

ADVERTISEMENT

ಗ್ರಂಥಾಲಯದ ಕಂಬಕ್ಕೆ ಹಾನಿ ಮಾಡಿದ ಗುತ್ತಿಗೆದಾರರಿಗೆ ಅದನ್ನು ಸರಿಪಡಿಸದಲು ಸೂಚಿಸಲಾಗಿದೆ ಎಂದು ಚಿಕ್ಕೋಡಿ ತಾಲ್ಲೂಕು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ ಬಿ.ಆರ್. ಜಂಬಗೆ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.