ADVERTISEMENT

ಚಿಕ್ಕೋಡಿ: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

​ಪ್ರಜಾವಾಣಿ ವಾರ್ತೆ
Published 2 ಮಾರ್ಚ್ 2026, 7:31 IST
Last Updated 2 ಮಾರ್ಚ್ 2026, 7:31 IST
ಚಿಕ್ಕೋಡಿ ಪಟ್ಟಣದ ಪರಟಿ ನಾಗಲಿಂಗೇಶ್ವರ ಕಲ್ಯಾಣ ಮಂಟಪದಲ್ಲಿ 2025-26ನೇ ಸಾಲಿನ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿ ಹಮ್ಮಿಕೊಂಡಿದ್ದ ಚಿಕ್ಕೋಡಿ ಶೈಕ್ಷಣಿಕ ಜಿಲ್ಲಾ ಮಟ್ಟದ ಕಾರ್ಯಾಗಾರದಲ್ಲಿ ಜಿಲ್ಲೆಯ ವಿವಿಧ ತಾಲ್ಲೂಕಿನ ಆಯ್ದ ವಿದ್ಯಾರ್ಥಿಗಳು ಭಾಗವಹಿಸಿದ್ದರು
ಚಿಕ್ಕೋಡಿ ಪಟ್ಟಣದ ಪರಟಿ ನಾಗಲಿಂಗೇಶ್ವರ ಕಲ್ಯಾಣ ಮಂಟಪದಲ್ಲಿ 2025-26ನೇ ಸಾಲಿನ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿ ಹಮ್ಮಿಕೊಂಡಿದ್ದ ಚಿಕ್ಕೋಡಿ ಶೈಕ್ಷಣಿಕ ಜಿಲ್ಲಾ ಮಟ್ಟದ ಕಾರ್ಯಾಗಾರದಲ್ಲಿ ಜಿಲ್ಲೆಯ ವಿವಿಧ ತಾಲ್ಲೂಕಿನ ಆಯ್ದ ವಿದ್ಯಾರ್ಥಿಗಳು ಭಾಗವಹಿಸಿದ್ದರು   

ಚಿಕ್ಕೋಡಿ: ‘ಪರೀಕ್ಷೆಗಳು ವಿದ್ಯಾರ್ಥಿಗಳು ತಮ್ಮ ಸಾಮರ್ಥ್ಯವನ್ನು ತೋರಿಸಲು ಇರುವ ಅಪೂರ್ವ ಅವಕಾಶವಾಗಿವೆ. ಇಂತಹ ಸುವರ್ಣ ಅವಕಾಶವನ್ನು ವಿದ್ಯಾರ್ಥಿಗಳು ಸದ್ಭಳಕೆ ಮಾಡಿಕೊಂಡು ಸಾಧನೆ ಮಾಡಬೇಕು’ ಎಂದು ಚಿಕ್ಕೋಡಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಹೇಳಿದರು.

ಪಟ್ಟಣದ ಪರಟಿ ನಾಗಲಿಂಗೇಶ್ವರ ಕಲ್ಯಾಣಮಂಟಪದಲ್ಲಿ ಚಿಕ್ಕೋಡಿ ಶೈಕ್ಷಣಿಕ ಜಿಲ್ಲಾಮಟ್ಟದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಭಾನುವಾರ ಹಮ್ಮಿಕೊಂಡಿದ್ದ ಒಂದು ದಿನದ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಡಿಡಿಪಿಐ ಆರ್.ಎಸ್.ಸೀತಾರಾಮು ಮಾತನಾಡಿ, ‘ಪರೀಕ್ಷೆ ಎನ್ನುವುದು ಹಬ್ಬವಿದ್ದಂತೆ. ವಿದ್ಯಾರ್ಥಿಗಳು ಪರೀಕ್ಷೆಯನ್ನು ಸಂಭ್ರಮದಿಂದ ಬರೆಯಬೇಕು’ ಎಂದು ಹೇಳಿದರು.

ADVERTISEMENT

ಕಾರ್ಯಾಗಾರದಲ್ಲಿ ‘ಪರೀಕ್ಷಾ ಭಯ ಹೋಗಲಾಡಿಸುವುದು ಮತ್ತು ಒತ್ತಡ ನಿರ್ವಹಣೆ’ ಕುರಿತು ಬೈಲವಾಡದ ಪ್ರಕಾಶ ಮಾಸ್ತಿಹೊಳಿ, ‘ಪರೀಕ್ಷಾ ಸಿದ್ಧತೆ, ಪರಿಣಾಮಕಾರಿ ಅಧ್ಯಯನ’ ವಿಷಯ ಕುರಿತು ಶಿರಗಾಂವದ ಸುನೀಲ ಕಾಜಗಾರ, ‘ಮಾನಸಿಕ ಆರೋಗ್ಯ, ಸಮಯದ ಹೊಂದಾಣಿಕೆ’ ಕುರಿತು ಬೆಲ್ಲದ ಬಾಗೇವಾಡಿಯ ಸುನೀಲ ಹಲಕರ್ಣಿ, ‘ಗಣಿತ ವಿಷಯದ ಪ್ರಮುಖ ಅಂಶಗಳು’ ಕುರಿತು ಅರ್ಜುನವಾಡದ ಸುನೀಲ ಖೋತ 2025-26ನೇ ಸಾಲಿನ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ವಿಶೇಷ ಉಪನ್ಯಾಸ ನೀಡಿದರು.

ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ, ಚಿಕ್ಕೋಡಿ ಬಿಇಒ ಪ್ರಭಾವತಿ ಪಾಟೀಲ, ಜಿಲ್ಲಾ ನೋಡಲ್ ಅಧಿಕಾರಿ ಎಚ್‌.ಎಸ್‌.ಖಾಡೆ, ನಿಪ್ಪಾಣಿ ಬಿಇಒ ಮಹಾದೇವಿ ನಾಯ್ಕ, ರಾಯಬಾಗ ಬಿಇಒ ಬಸವರಾಜಪ್ಪ.ಆರ್, ಅಥಣಿ ಬಿಇಒ ಮಲ್ಲಪ್ಪ ಮುಂಜಿ, ಕಾಗವಾಡ ಬಿಇಒ ಪಾಂಡುರಂಗ ಮದಬಾವಿ ಇತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.