
ಪ್ರಜಾವಾಣಿ ವಾರ್ತೆ
ಚಿಕ್ಕೋಡಿ: ಪಟ್ಟಣದ ವೆಂಕಟೇಶ್ವರ ಗಲ್ಲಿಯಲ್ಲಿ 2 ವರ್ಷದ ಋತ್ವಿಕ ಆನಂದ ಕುದುರೆ ಎಂಬ ಮಗುವಿನ ಮೇಲೆ ಬುಧವಾರ ಬೆಳಿಗ್ಗೆ ಬೀದಿ ನಾಯಿಗಳು ದಾಳಿ ಮಾಡಿ ಗಾಯಗೊಳಿಸಿವೆ. ಮಗುವಿನ ಮುಖಕ್ಕೆ ನಾಯಿಗಳು ಕಚ್ಚಿ ಗಾಯಗೊಳಿಸಿವೆ. ಮಗುವನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಮಗು ಚೇತರಿಸಿಕೊಂಡಿದೆ.
ಮಗುವಿನ ಮೇಲೆ ಬೀದಿ ನಾಯಿಗಳು ದಾಳಿ ಮಾಡಿದ ಪ್ರದೇಶದಲ್ಲಿಯೇ ಅಂಗನವಾಡಿ ಕೇಂದ್ರವಿದ್ದು, ಅಂಗನವಾಡಿ ಕೇಂದ್ರಕ್ಕೆ ಬರುವ ಮಕ್ಕಳ ಪಾಲಕರು ಆತಂಕಕ್ಕೊಳಗಾಗಿದ್ದಾರೆ. ಈ ಕುರಿತು ಹಲವು ಭಾರಿ ಪುರಸಭೆ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಕ್ರಮ ಕೈಗೊಳ್ಳದಿರುವುದೇ ಇಂತಹದೊಂದು ಘಟನೆಗೆ ಕಾರಣವಾಗಿದೆ ಎನ್ನುವುದು ಸಾರ್ವಜನಿಕರ ಆರೋಪ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.