ADVERTISEMENT

ಚಿಕ್ಕೋಡಿ: ಇನ್ನೆರಡು ಸೇತುವೆ ಸಂಚಾರಕ್ಕೆ ಮುಕ್ತ

​ಪ್ರಜಾವಾಣಿ ವಾರ್ತೆ
Published 19 ಅಕ್ಟೋಬರ್ 2020, 10:11 IST
Last Updated 19 ಅಕ್ಟೋಬರ್ 2020, 10:11 IST

ಬೆಳಗಾವಿ: ನಗರದಲ್ಲಿ ಸೋಮವಾರ ಮಧ್ಯಾಹ್ನ ಕೆಲ ನಿಮಿಷ ಸಾಧಾರಣ ಮಳೆ ಬಿದ್ದಿತು.

ದಕ್ಷಿಣ ಮಹಾರಾಷ್ಟ್ರದ ಘಟ್ಟ‌ ಪ್ರದೇಶದಲ್ಲಿ ಮಳೆ ತಗ್ಗಿದ್ದು, ಕೃಷ್ಣಾ ಮತ್ತು ಉಪ ನದಿಗಳಿಗೆ ಸೇರುವ ನೀರಿನ ಪ್ರಮಾಣ ಸೋಮವಾರ ಮತ್ತಷ್ಟು ಕಡಿಮೆಯಾಗಿದೆ. ಆ ರಾಜ್ಯದ ರಾಜಾಪುರ ಬ್ಯಾರೇಜ್‌ನಿಂದ 42,625 ಮತ್ತು ದೂಧ್‌ಗಂಗಾ ನದಿಯಿಂದ 3,872 ಕ್ಯುಸೆಕ್ ಸೇರಿದಂತೆ ಚಿಕ್ಕೋಡಿ ತಾಲ್ಲೂಕಿನ ಕಲ್ಲೋಳ ಬಳಿ ಕೃಷ್ಣಾ ನದಿಗೆ 46,497 ಕ್ಯುಸೆಕ್ ನೀರು ಸೇರುತ್ತಿದೆ.

ಕೃಷ್ಣಾ ನದಿಗೆ ನಿರ್ಮಿಸಿರುವ ಕಲ್ಲೋಳ–ಯಡೂರ ಹಾಗೂ ದೂಧ್‌ಗಂಗಾ ನದಿಗೆ ಕಟ್ಟಲಾಗಿರುವ ಚಿಕ್ಕೋಡಿ ತಾಲ್ಲೂಕಿನ ಮಲಿಕವಾಡ–ದತ್ತವಾಡ ಸೇತುವೆ ಕಂ ಬ್ಯಾರೇಜ್‌ಗಳು ಸಂಚಾರಕ್ಕೆ ಮುಕ್ತವಾಗಿವೆ. ಇದರೊಂದಿಗೆ ಆ ತಾಲ್ಲೂಕಿನ ಎಲ್ಲ ಸೇತುವೆಗಳೂ ಸಂಚಾರಕ್ಕೆ ಮುಕ್ತವಾದಂತಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.