ADVERTISEMENT

ಎಂ.ಕೆ.ಹುಬ್ಬಳ್ಳಿ: ಬಾಲ್ಯ ವಿವಾಹ ನಿಷೇಧ ಜಾಗೃತಿ ಕಾರ್ಯಕ್ರಮ

​ಪ್ರಜಾವಾಣಿ ವಾರ್ತೆ
Published 15 ಜನವರಿ 2026, 4:06 IST
Last Updated 15 ಜನವರಿ 2026, 4:06 IST
ಚನ್ನಮ್ಮನ ಕಿತ್ತೂರು ತಾಲ್ಲೂಕಿನ ತುರಮರಿ ಗ್ರಾಮದಲ್ಲಿ ‘ಬಾಲ್ಯವಿವಾಹ ಮುಕ್ತ ಭಾರತ, ಬಾಲ್ಯ ವಿವಾಹ ನಿಷೇಧ ಜಾಗೃತಿ’ ಕಾರ್ಯಕ್ರಮ ನಡೆಯಿತು
ಚನ್ನಮ್ಮನ ಕಿತ್ತೂರು ತಾಲ್ಲೂಕಿನ ತುರಮರಿ ಗ್ರಾಮದಲ್ಲಿ ‘ಬಾಲ್ಯವಿವಾಹ ಮುಕ್ತ ಭಾರತ, ಬಾಲ್ಯ ವಿವಾಹ ನಿಷೇಧ ಜಾಗೃತಿ’ ಕಾರ್ಯಕ್ರಮ ನಡೆಯಿತು   

ಎಂ.ಕೆ.ಹುಬ್ಬಳ್ಳಿ: ತಾಲ್ಲೂಕು ಪಂಚಾಯಿತಿ ಕಿತ್ತೂರ ಹಾಗೂ ತಾಲ್ಲೂಕು ಕಾನೂನು ಸೇವಾ ಸಮಿತಿ ನ್ಯಾಯವಾದಿಗಳ ಸಂಘದ ಸಹಯೋಗದಲ್ಲಿ ನ್ಯಾಯಾಧೀಶರ ನಿರ್ದೇಶದನ್ವಯ ‘ಬಾಲ್ಯವಿವಾಹ ಮುಕ್ತ ಭಾರತ, ಬಾಲ್ಯ ವಿವಾಹ ನಿಷೇಧ ಜಾಗೃತಿ’ ಕಾರ್ಯಕ್ರಮ ಜರುಗಿತು.

ಚನ್ನಮ್ಮನ ಕಿತ್ತೂರು ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಬಾಲ್ಯ ವಿವಾಹ ತಡೆಗಟ್ಟುವ ಮತ್ತು ಅದರಿಂದಾಗುವ ತೊಂದರೆಗಳ ಬಗ್ಗೆ ಜನರಿಗೆ ತಿಳಿಹೇಳಲಾಯಿತು. ಬಾಲ್ಯ ವಿವಾಹ ನಡೆಯುತ್ತಿದ್ದರೆ, ತಕ್ಷಣವೇ ಮಕ್ಕಳ ಸಹಾಯವಾಣಿ ಅಥವಾ ಪೊಲೀಸ್ ಇಲಾಖೆ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಲು ತಿಳಿಸಿದರು.

ವೀರಾಪುರ, ಅಂಬಡಗಟ್ಟಿ, ದೇವರಶೀಗಿಹಳ್ಳಿ, ಕಾದರವಳ್ಳಿ, ಹುಣಶೀಕಟ್ಟಿ, ತುರಮರಿ, ಕಲಭಾವಿ ಸೇರಿ ವಿವಿಧ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ‘ಬಾಲ್ಯವಿವಾಹ ಮುಕ್ತ ಭಾರತ, ಬಾಲ್ಯ ವಿವಾಹ ನಿಷೇದ ಜಾಗೃತಿ’ ಕಾರ್ಯಕ್ರಮ ನಡೆಸಲಾಯಿತು.

ADVERTISEMENT

ಕಾನೂನು ಸೇವಾ ಸಮಿತಿ ವಕೀರಾದ ಪಿ.ಬಿ.ತಳವಾರ, ಎನ್.ಎ.ಮರೇದ, ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ರೀದೇವಿ ಕುಂಟೋಜಿ, ಕಿತ್ತೂರು ನ್ಯಾಯಾಲಯದ ಸಿಬ್ಬಂದಿ ದ್ಯಾಮಣ್ಣ ಕಬ್ಬೂರ, ಆನಂದ ಮಾಳಗಿ ಹಾಗೂ ಆಯಾ ಗ್ರಾ.ಪಂ ಅಧಿಕಾರಿಗಳು, ಜನಪ್ರತಿನಿಧಿಗಳು, ಗ್ರಾಮಸ್ಥರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.