ADVERTISEMENT

ಮಕ್ಕಳನ್ನು ಸ್ಪರ್ಧಾತ್ಮಕ ಯುಗಕ್ಕೆ ಸನ್ನದ್ಧಗೊಳಿಸಿ: ಡಾ.ಎಸ್.ಸಿ. ಧಾರವಾಡ

​ಪ್ರಜಾವಾಣಿ ವಾರ್ತೆ
Published 14 ನವೆಂಬರ್ 2020, 13:41 IST
Last Updated 14 ನವೆಂಬರ್ 2020, 13:41 IST
ಬೆಳಗಾವಿಯ ಕೆಎಲ್‌ಇ ಶತಮಾನೋತ್ಸವ ಚಾರಿಟಬಲ್ ಆಸ್ಪತ್ರೆಯಲ್ಲಿ ಶನಿವಾರ ನಡೆದ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ನಿರ್ದೇಶಕ ಡಾ.ಎಸ್.ಸಿ. ಧಾರವಾಡ ಮಾತನಾಡಿದರು
ಬೆಳಗಾವಿಯ ಕೆಎಲ್‌ಇ ಶತಮಾನೋತ್ಸವ ಚಾರಿಟಬಲ್ ಆಸ್ಪತ್ರೆಯಲ್ಲಿ ಶನಿವಾರ ನಡೆದ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ನಿರ್ದೇಶಕ ಡಾ.ಎಸ್.ಸಿ. ಧಾರವಾಡ ಮಾತನಾಡಿದರು   

ಬೆಳಗಾವಿ: ‘ಸ್ಪರ್ಧಾತ್ಮಕ ಯುಗಕ್ಕೆ ತಕ್ಕಂತೆ ಮಕ್ಕಳನ್ನು ಸದೃಢರನ್ನಾಗಿ ಸನ್ನದ್ಧರಾಗಿಸಬೇಕು’ ಎಂದು ಕೆಎಲ್‌ಇ ಶತಮಾನೋತ್ಸವ ಚಾರಿಟಬಲ್ ಆಸ್ಪತ್ರೆ ನಿರ್ದೇಶಕ ಡಾ.ಎಸ್.ಸಿ. ಧಾರವಾಡ ಸಲಹೆ ನೀಡಿದರು.

ಇಲ್ಲಿನ ಕೆಎಲ್‌ಇ ಶತಮಾನೋತ್ಸವ ಚಾರಿಟಬಲ್ ಆಸ್ಪತ್ರೆಯ ಚಿಕ್ಕಮಕ್ಕಳ ವಿಭಾಗದಿಂದ ಶನಿವಾರ ಹಮ್ಮಿಕೊಂಡಿದ್ದ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಚಿಕ್ಕ ಕುಟುಂಬ ಎಲ್ಲ ವಿಷಯದಲ್ಲೂ ಉತ್ತಮ. ಮಕ್ಕಳಿಗೆ ಒಳ್ಳೆಯ ಶಿಕ್ಷಣ, ಆರೋಗ್ಯ ಕಲ್ಪಿಸಲು ಮತ್ತು ಉತ್ತಮ ವಾತಾವರಣ ಕಲ್ಪಿಸಲು ಸಾಧ್ಯವಾಗುತ್ತದೆ. ಸಮಾಜದಲ್ಲಿ ಬದಲಾವಣೆ ಆಗುತ್ತಲೇ ಇರುತ್ತದೆ. ಹೀಗಾಗಿ, ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಪಾಲಕರು ಹಾಗೂ ಶಿಕ್ಷಕರು ಮಕ್ಕಳನ್ನು ಚಿಕ್ಕವರಿದ್ದಾಗಿನಿಂದಲೇ ಪ್ರೋತ್ಸಾಹಿಸಬೇಕು’ ಎಂದು ತಿಳಿಸಿದರು.

ADVERTISEMENT

ಕೆಎಲ್‌ಇ ಹೋಮಿಯೋಪತಿ ಕಾಲೇಜಿನ ಪ್ರಾಂಶುಪಾಲ ಡಾ.ಎಂ.ಎ. ಉಡಚನಕರ, ‘ಮಕ್ಕಳು ನಮ್ಮನ್ನು ಅನುಕರಿಸುತ್ತಾರೆ. ಹೀಗಾಗಿ, ತಂದೆ, ತಾಯಿ ಅಥವಾ ಪೋಷಕರು ಒಳ್ಳೆಯ ಹವ್ಯಾಸಗಳನ್ನು ರೂಢಿಸಿಕೊಳ್ಳಬೇಕು’ ಎಂದರು.

ಡಾ.ಸಂತೋಷಕುಮಾರ ಕರಮಸಿ, ಡಾ.ಬಸವರಾಜ ಕುಡಸೋಮಣ್ಣವರ ಇದ್ದರು.

ಮಕ್ಕಳಿಗೆ ಉಡುಗೊರೆ ನೀಡಲಾಯಿತು. ಚಿಕ್ಕಮಕ್ಕಳ ವಿಭಾಗದ ಮುಖ್ಯಸ್ಥೆ ಡಾ.ಸೌಮ್ಯಾ ವೇರ್ಣೇಕರ ನಿರೂಪಿಸಿದರು. ಅರುಣ ನಾಗಣ್ಣವರ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.