
ಬೆಳಗಾವಿ: ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ(ಬುಡಾ) ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ ಶನಿವಾರ ಅಧಿಕಾರ ಸ್ವೀಕರಿಸಿದರು.
‘ಬುಡಾಗೆ ಐತಿಹಾಸಿಕ ಹಿನ್ನೆಲೆಯಿದೆ. ಅದಕ್ಕೊಂದು ಮೆರುಗು ನೀಡುತ್ತೇನೆ. ನಗರದ ಸರ್ವತೋಮುಖ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ’ ಎಂದು ಭರವಸೆ ನೀಡಿದರು.
‘ಬುಡಾದಲ್ಲಿ ನಡೆಯುತ್ತಿರುವ ಅಕ್ರಮಗಳಿಗೆ ಹೇಗೆ ಕಡಿವಾಣ ಹಾಕುತ್ತೀರಿ’ ಎಂದು ಸುದ್ದಿಗಾರರ ಪ್ರಶ್ನೆಗೆ, ‘ಈಗಷ್ಟೇ ಅಧಿಕಾರ ವಹಿಸಿಕೊಂಡಿದ್ದೇನೆ. ಈ ಬಗ್ಗೆ ಸಮಗ್ರವಾಗಿ ಪರಿಶೀಲಿಸಿ, ಮುಂದಿನ ಕ್ರಮ ಕೈಗೊಳ್ಳುತ್ತೇನೆ’ ಎಂದರು.
ಬೆಳಗಾವಿ ಉತ್ತರ ಕ್ಷೇತ್ರದ ಶಾಸಕ ಆಸೀಫ್ ಸೇಠ್, ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಇತರರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.