ಬೆಳಗಾವಿ: ‘ಕೊರೊನಾ ಮುಂಜಾಗ್ರತೆಯ ಹಿನ್ನೆಲೆಯಲ್ಲಿ ಬೆಳಗಾವಿ ಹಾಗೂ ಕಾರವಾರ ಧರ್ಮಪ್ರಾಂತಕ್ಕೆ ಒಳಪಡುವ ಚರ್ಚ್‌ಗಳನ್ನು ಜೂನ್ 30ರ ನಂತರವೇ ತೆರೆಯಲಾಗುವುದು’ ಎಂದು ಬಿಷಪ್ ಡೆರಿಕ್ ಫರ್ನಾಂಡೀಸ್ ಹೇಳಿದರು.
‘ಚರ್ಚ್ ಸೇರಿದಂತೆ ಎಲ್ಲ ಧರ್ಮದ ಪ್ರಾರ್ಥನಾ ಮಂದಿರಗಳನ್ನು ಜೂನ್ 13ರಿಂದ ತೆರೆಯಲು ಸರ್ಕಾರ ಅನುಮತಿ ನೀಡಿತ್ತು. ಇದರ ಹಿನ್ನೆಲೆಯಲ್ಲಿ ಚರ್ಚ್‌ನಲ್ಲಿ ಪ್ರಾರ್ಥನೆ ಸಲ್ಲಿಸಲು ಅವಕಾಶವಿದೆಯೇ ಎಂದು ಹಲವರು ಕೇಳಿದ್ದರು. ಅದಕ್ಕಾಗಿ ವಿವರಣೆ ನೀಡುತ್ತಿದ್ದೇನೆ’ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬಾಗಲಕೋಟೆ ಹಾಗೂ ನೆರೆಯ ಮಹಾರಾಷ್ಟ್ರದ ಚಂದಗಡ ತಾಲ್ಲೂಕಿನ ಚರ್ಚ್‌ಗಳು ಬೆಳಗಾವಿ ಧರ್ಮಪ್ರಾಂತ ವ್ಯಾಪ್ತಿಯೊಳಗೆ ಕಾರ್ಯನಿರ್ವಹಿಸುತ್ತಿವೆ.
‘ಜನರ ಆರೋಗ್ಯ ಹಾಗೂ ಸುರಕ್ಷತೆಗೆ ಚರ್ಚ್ ಯಾವಾಗಲೂ ಆದ್ಯತೆ ನೀಡಿದೆ. ಇದೇ ಹಿನ್ನೆಲೆಯಲ್ಲಿ ಚರ್ಚ್‌ಗಳನ್ನು ತೆರೆಯುವುದನ್ನು ಮುಂದೂಡಲಾಗಿದೆ. ಜೂನ್ 30ರ ನಂತರ ಪರಿಸ್ಥಿತಿ ಅವಲೋಕಿಸಿ, ಚರ್ಚ್‌ಗಳನ್ನು ತೆರೆಯಲಾಗುವುದು’ ಎಂದು ಅವರು ವಿವರಣೆ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.