ADVERTISEMENT

‘ಕಾನ್‌ಸ್ಟೆಬಲ್‌ಗಳು ‍ಪೊಲೀಸ್ ವ್ಯವಸ್ಥೆಯ ಬೆನ್ನೆಲುಬು’

​ಪ್ರಜಾವಾಣಿ ವಾರ್ತೆ
Published 16 ಮಾರ್ಚ್ 2022, 13:03 IST
Last Updated 16 ಮಾರ್ಚ್ 2022, 13:03 IST
ಬೆಳಗಾವಿಯ ತಾತ್ಕಾಲಿಕ ಪೊಲೀಸ್ ತರಬೇತಿ ಶಾಲೆಯ 11ನೇ ತಂಡದ ನಾಗರಿಕ ಪೊಲೀಸ್ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥಸಂಚಲನದಲ್ಲಿ ಉತ್ತರ ವಲಯ ಐಜಿಪಿ ಎನ್.ಸತೀಶ್‌ಕುಮಾರ್‌, ಎಸ್ಪಿ ಲಕ್ಷ್ಮಣ ನಿಂಬರಗಿ ಮೊದಲಾದವರು ಪಾಲ್ಗೊಂಡಿದ್ದಾರೆ
ಬೆಳಗಾವಿಯ ತಾತ್ಕಾಲಿಕ ಪೊಲೀಸ್ ತರಬೇತಿ ಶಾಲೆಯ 11ನೇ ತಂಡದ ನಾಗರಿಕ ಪೊಲೀಸ್ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥಸಂಚಲನದಲ್ಲಿ ಉತ್ತರ ವಲಯ ಐಜಿಪಿ ಎನ್.ಸತೀಶ್‌ಕುಮಾರ್‌, ಎಸ್ಪಿ ಲಕ್ಷ್ಮಣ ನಿಂಬರಗಿ ಮೊದಲಾದವರು ಪಾಲ್ಗೊಂಡಿದ್ದಾರೆ   

ಬೆಳಗಾವಿ: ಇಲ್ಲಿನ ತಾತ್ಕಾಲಿಕ ಪೊಲೀಸ್ ತರಬೇತಿ ಶಾಲೆಯ 11ನೇ ತಂಡದ ನಾಗರಿಕ ಪೊಲೀಸ್ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥಸಂಚಲನ ಬುಧವಾರ ನಡೆಯಿತು.

ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಕಾರ್ಯಕ್ರಮ ನಡೆಯಿತು. ಯಶಸ್ವಿಯಾಗಿ ತರಬೇತಿ ಪೂರ್ಣಗೊಳಿಸಿದ ಪ್ರಶಿಕ್ಷಣಾರ್ಥಿಗಳು ಪಥಸಂಚಲನವನ್ನು ಆಕರ್ಷಕವಾಗಿ ಪ್ರಸ್ತುತಪಡಿಸಿದರು. ಪ್ರತಿಜ್ಞಾವಿಧಿ ಸ್ವೀಕರಿಸಿದರು.

ಮುಖ್ಯಅತಿಥಿಯಾಗಿ ಪಾಲ್ಗೊಂಡು ಗೌರವ ವಂದನೆ ಸ್ವೀಕರಿಸಿದ ಉತ್ತರ ವಲಯ ಐಜಿಪಿ ಎನ್. ಸತೀಶ್ ಕುಮಾರ್, ‘ಕಾನ್‌ಸ್ಟೆಬಲ್‌ಗಳು ಇಡೀ ಪೊಲೀಸ್ ವ್ಯವಸ್ಥೆಯ ಬೆನ್ನೆಲುಬಿದ್ದಂತೆ. ಅವರ ಕಾರ್ಯ ಮಹತ್ವದ್ದಾಗಿದೆ. ವೃತ್ತಿ ಗೌರವ ಎತ್ತಿ ಹಿಡಿಯುವ ಜೊತೆಗೆ, ಇಲಾಖೆಯ ಹೆಸರನ್ನು ಉಳಿಸಬೇಕು’ ಎಂದು ತಿಳಿಸಿದರು.

ADVERTISEMENT

ಎಸ್ಪಿ ಲಕ್ಷ್ಮಣ ನಿಂಬರಗಿ, ನಗರ ಪೊಲೀಸ್ ಆಯುಕ್ತ ಡಾ.ಎಂ.ಬಿ. ಬೋರಲಿಂಗಯ್ಯ, ಹೆಚ್ಚುವರಿ ಎಸ್ಪಿ ಮಹಾನಿಂಗ ನಂದಗಾವಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.