
ಪ್ರಜಾವಾಣಿ ವಾರ್ತೆ
ಅಥಣಿ: ಗಡಿಭಾಗದ ಖೋತವಾಡಿ ಗ್ರಾಮದ ಹೊರವಲಯದಲ್ಲಿ ಸೋದರ ಸಂಬಂಧಿಗಳಿಬ್ಬರು ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆದಾಡಿಕೊಂಡು ಸೋಮವಾರ ಮೃತಪಟ್ಟಿದ್ದಾರೆ.
ಶಿರೂರ ಗ್ರಾಮ ಪಂಚಾಯಿತಿ ಸದಸ್ಯ ಹಣಮಂತ ರಾಮಚಂದ್ರ ಖೋತ (38) ಹಾಗೂ ಖಂಡು ತಾನಾಜಿ ಖೋತ (27) ಮೃತರು.
ಹೊಡೆದಾಟದಲ್ಲಿ ತೀವ್ರ ಗಾಯಗೊಂಡಿದ್ದ ಇಬ್ಬರನ್ನೂ ಮಹಾರಾಷ್ಟ್ರದ ಕವಟೆ ಮಹಾಂಕಾಳ ಜಿಲ್ಲಾ ಉಪಕೇಂದ್ರ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು.
ಪೊಲೀಸರು ಪರಿಶೀಲನೆ ನಡೆಸಿದ್ದು, ಹೊಡೆದಾಟಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.