ADVERTISEMENT

ಬೆಳಗಾವಿ | ಅಂಬೇವಾಡಿಯಲ್ಲಿ ಆಸ್ತಿ ವಿಚಾರಕ್ಕೆ ಗಲಾಟೆ: 8 ಜನರಿಗೆ ಗಾಯ

​ಪ್ರಜಾವಾಣಿ ವಾರ್ತೆ
Published 6 ಏಪ್ರಿಲ್ 2025, 18:12 IST
Last Updated 6 ಏಪ್ರಿಲ್ 2025, 18:12 IST
   

ಬೆಳಗಾವಿ: ಆಸ್ತಿ ವಿಚಾರಕ್ಕೆ ಸಂಬಂಧಿಸಿ, ತಾಲ್ಲೂಕಿನ ಅಂಬೇವಾಡಿ ಗ್ರಾಮದಲ್ಲಿ ಭಾನುವಾರ ಸಹೋದರರ ಕುಟುಂಬಗಳ ಮಧ್ಯೆ ಗಲಾಟೆಯಾಗಿದೆ.

ಎರಡು ಗುಂಪಿನ ಸದಸ್ಯರು ಮಾರಕಾಸ್ತ್ರ ಬಳಸಿ ಪರಸ್ಪರ‌ ಹಲ್ಲೆ ಮಾಡಿದ್ದು, ಎಂಟು ಜನ ಗಾಯಗೊಂಡಿದ್ದಾರೆ.

'ಆಸ್ತಿ ವಿವಾದ ಹಿನ್ನೆಲೆಯಲ್ಲಿ ಗೋವಿಂದ ರಕ್ಷೆ ಮತ್ತು ಯಲ್ಲಪ್ಪ ರಕ್ಷೆ ಸಹೋದರರ ಕುಟುಂಬದವರು ಹೊಡೆದಾಡಿದ್ದಾರೆ. ಈ ಪೈಕಿ ಗಂಭೀರವಾಗಿ ಗಾಯಗೊಂಡ ಮೂವರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಣ್ಣ-ಪುಟ್ಟ ಗಾಯಗೊಂಡವರು ಚಿಕಿತ್ಸೆ ಪಡೆದು ಮನೆಗೆ ಮರಳಿದ್ದಾರೆ. ತನಿಖೆ ನಡೆದಿದೆ' ಎಂದು ಕಾಕತಿ ಠಾಣೆ ಇನ್ ಸ್ಪೆಕ್ಟರ್ 'ಪ್ರಜಾವಾಣಿ'ಗೆ ತಿಳಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.