ADVERTISEMENT

ಸವದತ್ತಿಯ ಯಲ್ಲಮ್ಮ ದರ್ಶನ ಪಡೆದ ಸಿಎಂ ಬೊಮ್ಮಾಯಿ

​ಪ್ರಜಾವಾಣಿ ವಾರ್ತೆ
Published 3 ನವೆಂಬರ್ 2021, 14:57 IST
Last Updated 3 ನವೆಂಬರ್ 2021, 14:57 IST
ಪತ್ನಿ ಜೊತೆ ರೇಣುಕಾ ಯಲ್ಲಮ್ಮದೇವಿ ದೇವಸ್ಥಾನಕ್ಕೆ ಭೇಟಿ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ.
ಪತ್ನಿ ಜೊತೆ ರೇಣುಕಾ ಯಲ್ಲಮ್ಮದೇವಿ ದೇವಸ್ಥಾನಕ್ಕೆ ಭೇಟಿ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ.   

ಬೆಳಗಾವಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪತ್ನಿ ಚನ್ನಮ್ಮ ಅವರೊಂದಿಗೆ ಜಿಲ್ಲೆಯ ಸವದತ್ತಿಯ ಯಲ್ಲಮ್ಮನ ಗುಡ್ಡದಲ್ಲಿರುವ ರೇಣುಕಾ ಯಲ್ಲಮ್ಮದೇವಿ ದೇವಸ್ಥಾನಕ್ಕೆ ಬುಧವಾರ ಸಂಜೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಬೆಳಕಿನ ಹಬ್ಬ ದೀಪಾವಳಿಯು ಇಡೀ ಕನ್ನಡ ನಾಡಿಗೆ ಬೆಳಕು ತರಲೆಂದು ತಾಯಿ ಯಲ್ಲಮ್ಮದೇವಿಯಲ್ಲಿ ಪ್ರಾರ್ಥಿಸಿದ್ದೇನೆ’ ಎಂದು ತಿಳಿಸಿದರು.

ಕ್ಷೇತ್ರದ ಶಾಸಕರೂ ಆಗಿರುವ ವಿಧಾನಸಭೆ ಉಪಸಭಾಧ್ಯಕ್ಷ ಆನಂದ ಮಾಮನಿ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.