ADVERTISEMENT

ಸಿಎಂ ಸ್ಥಾನ ಖಾಲಿ ಇಲ್ಲ; ದಲಿತ ಸಿಎಂ ಬಗ್ಗೆ ಚರ್ಚೆಯೇ ಅನಗತ್ಯ: ಸಚಿವ ದೇಶಪಾಂಡೆ

​ಪ್ರಜಾವಾಣಿ ವಾರ್ತೆ
Published 18 ಮೇ 2019, 11:40 IST
Last Updated 18 ಮೇ 2019, 11:40 IST
   

ಬೆಳಗಾವಿ: ‘ಮುಖ್ಯಮಂತ್ರಿ ಸ್ಥಾನ ಈಗ ಖಾಲಿ ಇಲ್ಲ. ದಲಿತ ಸಿ.ಎಂ ಬಗ್ಗೆ ಚರ್ಚೆಯೇ ಅನಗತ್ಯ’ ಎಂದು ಕಂದಾಯ ಸಚಿವ ಆರ್‌.ವಿ. ದೇಶಪಾಂಡೆ ಹೇಳಿದರು.

ಇಲ್ಲಿಗೆ ಸಮೀಪದ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಈಗಾಗಲೇ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಪಕ್ಷಗಳ ನಡುವೆ ಒಪ್ಪಂದ ಆಗಿದೆ. ಕುಮಾರಸ್ವಾಮಿ ಅವರೇ 5 ವರ್ಷಗಳ ಪೂರ್ಣಾವಧಿಗೆ ಮುಖ್ಯಮಂತ್ರಿಯಾಗಿರುತ್ತಾರೆ. ಇಂತಹ ಸ್ಥಿತಿಯಲ್ಲಿ ಸಿ.ಎಂಗೆ ಯಾರು ಸೂಕ್ತ ಅಭ್ಯರ್ಥಿ ಎನ್ನುವುದರ ಬಗ್ಗೆ ಚರ್ಚಿಸುವುದು ಒಳ್ಳೆಯದಲ್ಲ’ ಎಂದರು.

ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮುಖ್ಯಮಂತ್ರಿಯಾಗುವ ಎಲ್ಲ ಅರ್ಹತೆ ಇದೆ. ಆದರೆ, ಈಗ ಸ್ಥಾನ ಖಾಲಿ ಇಲ್ಲ. ಖಾಲಿಯಾದಾಗ ಚರ್ಚಿಸಬೇಕು. ರಾಜಕಾರಣಿಗಳು ಕಡಿಮೆ ಮಾತನಾಡಬೇಕು. ತೂಕಬದ್ಧವಾಗಿ ಮಾತನಾಡಬೇಕು. ಆಗ ಗೌರವ ಇರುತ್ತದೆ. ಇಲ್ಲದಿದ್ದರೆ ಮಾಧ್ಯಮಗಳು ಅದರ ಲಾಭ ಪಡೆದುಕೊಳ್ಳುತ್ತವೆ’ ಎಂದು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.