ADVERTISEMENT

ಡಿಸೆಂಬರ್‌ನೊಳಗೆ ಎಲ್ಲ ಕಾಮಗಾರಿ ಪೂರ್ಣಗೊಳಿಸಿ: ಸಂಸದ ಜಗದೀಶ ಶೆಟ್ಟರ್‌ ಸೂಚನೆ

​ಪ್ರಜಾವಾಣಿ ವಾರ್ತೆ
Published 3 ಜೂನ್ 2025, 15:00 IST
Last Updated 3 ಜೂನ್ 2025, 15:00 IST
ಬೆಳಗಾವಿ ರೈಲ್ವೆ ನಿಲ್ದಾಣಕ್ಕೆ ಸಂಸದ ಜಗದೀಶ ಶೆಟ್ಟರ್‌ ಮಂಗಳವಾರ ಭೇಟಿ ನೀಡಿ ಪರಿಶೀಲಿಸಿದರು
ಬೆಳಗಾವಿ ರೈಲ್ವೆ ನಿಲ್ದಾಣಕ್ಕೆ ಸಂಸದ ಜಗದೀಶ ಶೆಟ್ಟರ್‌ ಮಂಗಳವಾರ ಭೇಟಿ ನೀಡಿ ಪರಿಶೀಲಿಸಿದರು   

ಬೆಳಗಾವಿ: ಇಲ್ಲಿನ ರೈಲ್ವೆ ನಿಲ್ದಾಣಕ್ಕೆ ಸಂಸದ ಜಗದೀಶ ಶೆಟ್ಟರ್‌ ಮಂಗಳವಾರ ಭೇಟಿ ನೀಡಿ, ಪ್ರಧಾನಮಂತ್ರಿ ಅಮೃತ ಭಾರತ ಸ್ಟೇಷನ್ ಯೋಜನೆಯಡಿ ಕೈಗೊಳ್ಳುತ್ತಿರುವ ಅಭಿವೃದ್ಧಿ ಕಾಮಗಾರಿ ಪರಿಶೀಲಿಸಿದರು.

‘₹18 ಕೋಟಿ ವೆಚ್ಚದಲ್ಲಿ ಬೆಳಗಾವಿ ನಿಲ್ದಾಣದಲ್ಲಿ ಕೈಗೊಂಡ ಎಲ್ಲ ಕಾಮಗಾರಿಗಳನ್ನು 2025ರ ಡಿಸೆಂಬರ್‌ನೊಳಗೆ ಪೂರ್ಣಗೊಳಿಸಬೇಕು’ ಎಂದು ಸೂಚಿಸಿದರು.

ಫುಟ್‌ಓವರ್ ಬ್ರಿಡ್ಜ್ ನಿರ್ಮಾಣ ಕಾಮಗಾರಿ ಆಮೆಗತಿಯಲ್ಲಿ ಸಾಗುತ್ತಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಶೆಟ್ಟರ್‌, ಪ್ರಯಾಣಿಕರಿಗೆ ಆಗುತ್ತಿರುವ ತೊಂದರೆಗಳ ಕುರಿತಾಗಿ ರೈಲ್ವೆ ಅಧಿಕಾರಿಗಳ ಜತೆ ಚರ್ಚಿಸಿದರು.

ADVERTISEMENT

‘ಬೆಳಗಾವಿ ನಿಲ್ದಾಣದಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಎರಡನೇ ಪ್ರವೇಶದ್ವಾರ ನಿರ್ಮಿಸಿದ್ದಾರೆ. ಅದರ ಸದ್ಬಳಕೆ ಕುರಿತು ಜನರಲ್ಲಿ ಜಾಗೃತಿ ಮೂಡಿಸಬೇಕು’ ಎಂದು ನಿರ್ದೇಶನ ನೀಡಿದರು.

ಮೇಯರ್‌ ಮಂಗೇಶ ಪವಾರ, ಉಪಮೇಯರ್‌ ವಾಣಿ ಜೋಶಿ, ರೈಲ್ವೆ ಎಂಜಿನಿಯರ್‌ ಸಂತಿಲ್‌ಕುಮಾರ, ಎಸಿಎಂ ರಾಜಕುಮಾರ, ಬಿಜೆಪಿ ಗ್ರಾಮೀಣ ಜಿಲ್ಲಾ ಘಟಕದ ಅಧ್ಯಕ್ಷ ಸುಭಾಷ ಪಾಟೀಲ, ವಿಜಯ ಕೊಡಗನೂರ ಇತರರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.