ADVERTISEMENT

ಬೆಳಗಾವಿ: ಗೋಕಾಕದಲ್ಲಿ ರಾಹುಲ್, ಪ್ರಿಯಾಂಕಾ ನೇತೃತ್ವದಲ್ಲಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 7 ಜುಲೈ 2021, 7:49 IST
Last Updated 7 ಜುಲೈ 2021, 7:49 IST
ಬೆಳಗಾವಿಯಲ್ಲಿ ಕಾಂಗ್ರೆಸ್‌ನಿಂದ ಸೈಕಲ್‌ ಜಾಥಾ
ಬೆಳಗಾವಿಯಲ್ಲಿ ಕಾಂಗ್ರೆಸ್‌ನಿಂದ ಸೈಕಲ್‌ ಜಾಥಾ   

ಬೆಳಗಾವಿ: ಕೇಂದ್ರ, ರಾಜ್ಯ ಸರ್ಕಾರದ ವೈಫಲ್ಯ ಖಂಡಿಸಿ ಹಾಗೂ ಪೆಟ್ರೋಲ್, ಡೀಸೆಲ್ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ ಗೋಕಾಕದಲ್ಲಿ ಕೆಪಿಸಿಸಿಕಾರ್ಯಾಧ್ಯಕ್ಷಸತೀಶಜಾರಕಿಹೊಳಿಮಕ್ಕಳಾದ ರಾಹುಲ್ ಮತ್ತು ಪ್ರಿಯಾಂಕಾ ಜಾರಕಿಹೊಳಿ ನೇತೃತ್ವದಲ್ಲಿಕಾರ್ಯಕರ್ತರು ಬುಧವಾರ ಸೈಕಲ್ ಜಾಥಾ ನಡೆಸಿದರು.

ಬ್ಯಾಳಿ ಕಾಟಾದಿಂದ ಆರಂಭವಾದ ಜಾಥಾ ವಿವಿಧ ರಸ್ತೆಗಳಲ್ಲಿ ಸಂಚರಿಸಿತು. ಸಂಗೊಳ್ಳಿ ರಾಯಣ್ಣ ವೃತ್ತದ ಮಾರ್ಗವಾಗಿ ಬಸವೇಶ್ವರ ವೃತ್ತದಲ್ಲಿ ಮುಕ್ತಾಯವಾಯಿತು.ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಕಾರ್ಯಕರ್ತರು ಘೋಷಣೆ ಕೂಗಿದರು. ಅಗತ್ಯ ವಸ್ತುಗಳ ಬೆಲೆ ಇಳಿಕೆ ಮಾಡಬೇಕು. ಇಲ್ಲದಿದ್ದರೆ ಅಧಿಕಾರದಿಂದ ಕೆಳಗಿಳಿಯಬೇಕು ಎಂದು ಒತ್ತಾಯಿಸಿದರು.

ವಿವೇಕ ಜತ್ತಿ, ರಾಹುಲ್ ಬಡೆಸಗೋಳ, ರೆಹಮಾನ್ ಮೊಕಾಶಿ, ಪ್ರವೀಣ ಗುಡ್ಡಾಕಾಯಿ, ಬಸವರಾಜ ಸಾಯಣ್ಣವರ, ಸುನೀಲ ಅಂಕದವರ, ಕಲ್ಪನಾ ಕರೆನ್ನವರ, ಯಶೋಧಾ ಬಿರಡಿ, ಶಿವು ಕಿಲಾರಿ, ಬಸವಣ್ಣೆಪ್ಪ ಪರುಶೆಟ್ಟಿ, ಇಮ್ರಾನ್ ತಪಕೀರ, ರಾಜು ಮೇದಾರ, ಪ್ರಕಾಶ ಬಸಾಪುರೆ, ಮಾರುತಿ ಗುಟಗುದ್ದಿ, ಜುಬೇರ ಮಿರ್ಜಾನಾಯ್ಕ ಭಾಗವಹಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.