ADVERTISEMENT

ಸರ್ವರ ಅಭಿವೃದ್ಧಿಗಾಗಿ ಶ್ರಮಿಸುವ ಪಕ್ಷ ಕಾಂಗ್ರೆಸ್: ಪ್ರಿಯಾಂಕಾ

​ಪ್ರಜಾವಾಣಿ ವಾರ್ತೆ
Published 27 ಮಾರ್ಚ್ 2024, 16:04 IST
Last Updated 27 ಮಾರ್ಚ್ 2024, 16:04 IST
ಯಮಕನಮರಡಿಯ ಕುರಣಿ ಗ್ರಾಮದಲ್ಲಿ ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಬುಧವಾರ ಹಮ್ಮಿಕೊಳ್ಳಲಾದ ಪ್ರಚಾರ ಸಭೆಯಲ್ಲಿ ಪ್ರಿಯಾಂಕಾ ಜಾರಕಿಹೊಳಿ ಇವರನ್ನು ಮಹಿಳೆಯರು ಸನ್ಮಾನಿಸಿದರು
ಯಮಕನಮರಡಿಯ ಕುರಣಿ ಗ್ರಾಮದಲ್ಲಿ ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಬುಧವಾರ ಹಮ್ಮಿಕೊಳ್ಳಲಾದ ಪ್ರಚಾರ ಸಭೆಯಲ್ಲಿ ಪ್ರಿಯಾಂಕಾ ಜಾರಕಿಹೊಳಿ ಇವರನ್ನು ಮಹಿಳೆಯರು ಸನ್ಮಾನಿಸಿದರು   

ಯಮಕನಮರಡಿ: ‘ಸರ್ವರ ಅಭಿವೃದ್ಧಿಗಾಗಿ ಶ್ರಮಿಸುವ ಏಕೈಕ ಪಕ್ಷ ಕಾಂಗ್ರೆಸ್. ಆದ್ದರಿಂದ ತಾವೆಲ್ಲರೂ ಒಟ್ಟಾಗಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ ಗೆಲ್ಲಿಸಬೇಕು’ ಎಂದು ಚಿಕ್ಕೋಡಿ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಕಾರ್ಯಕರ್ತರಲ್ಲಿ ಮನವಿ ಮಾಡಿದರು.

ಅವರು ಸಮೀಪದ ಉಳ್ಳಾಗಡ್ಡಿ ಖಾನಾಪುರ, ಕುರಣಿ, ಹಂಚಿನಾಳ, ಕೋಚರಿ, ಗೋಟೂರ ಗ್ರಾಮದಲ್ಲಿ ಬುಧವಾರ ನಡೆದ ಲೋಕಸಭೆ ಚುನಾವಣೆ ಪ್ರಚಾರ ಸಭೆಯಲ್ಲಿ ಮಾತನಾಡಿದರು.

‘ಯುವ ಸಮುದಾಯಕ್ಕೆ ಹಾಗೂ ಮಹಿಳೆಯರಿಗೆ ಪ್ರಾತಿನಿಧ್ಯ ಕೊಡುವ ಉದ್ದೇಶದಿಂದ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ನನ್ನನ್ನು ವರಿಷ್ಠರು ಆಯ್ಕೆ ಮಾಡಿದ್ದಾರೆ’  ಎಂದರು.

ADVERTISEMENT

ಪಿ.ಎಚ್. ಪಾಟೀಲ, ರಾಜು ಅವಟೆ, ಸುಧೀರ ಗಿರಿಗೌಡರ, ಮಹಾಂತೇಶ ಮಗದುಮ್ಮ, ಆನಂದಸ್ವಾಮಿ ತವಗಮಠ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.