ADVERTISEMENT

ಕೊಟ್ಟ ಮಾತು ಉಳಿಸಿಕೊಂಡ ಕಾಂಗ್ರೆಸ್: ರಾಹುಲ ಜಾರಕಿಹೊಳಿ

​ಪ್ರಜಾವಾಣಿ ವಾರ್ತೆ
Published 15 ಏಪ್ರಿಲ್ 2024, 14:29 IST
Last Updated 15 ಏಪ್ರಿಲ್ 2024, 14:29 IST
ರಾಯಬಾಗ ಪಟ್ಟಣದಲ್ಲಿ ಸೋಮವಾರ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಪರ ರಾಹುಲ ಜಾರಕಿಹೊಳಿ ಮತಯಾಚನೆ ಮಾಡಿ ಮಾತನಾಡಿದರು 
ರಾಯಬಾಗ ಪಟ್ಟಣದಲ್ಲಿ ಸೋಮವಾರ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಪರ ರಾಹುಲ ಜಾರಕಿಹೊಳಿ ಮತಯಾಚನೆ ಮಾಡಿ ಮಾತನಾಡಿದರು    

ರಾಯಬಾಗ: ‘ಕಾಂಗ್ರೆಸ್‌ ಸರ್ಕಾರ ಕೊಟ್ಟ ಭರವಸೆಯನ್ನು ಈಡೇರಿಸಿದೆ. ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುವುದರೊಂದಿಗೆ ಅಭಿವೃದ್ಧಿ ಕೆಲಸಗಳನ್ನೂ ಮಾಡುತ್ತಿದೆ. ಬಿಜೆಪಿ ಮಾತ್ರ ಸುಳ್ಳು ಹೇಳಿಕೊಂಡೇ ಬಂದಿದೆ’ ಎಂದು ರಾಹುಲ ಜಾರಕಿಹೊಳಿ ಹೇಳಿದರು.

ಪಟ್ಟಣದ ಅರ್ಫಾ ಪ್ಯಾಲೇಸ್‌ನಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಪರ ಮತಯಾಚನೆ ಮಾಡಿ ಅವರು ಮಾತನಾಡಿದರು. ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ ಎಂದರು.

ಈ ಸಂದರ್ಭದಲ್ಲಿ ನಿರ್ಮಲಾ ಪಾಟೀಲ, ಅಪ್ಪಾಸಾಬ ಕುಲಗುಡೆ, ಅಬ್ದುಲ್ ಸತ್ತಾರ ಮುಲ್ಲಾ, ಹಾಜಿ ಮುಲ್ಲಾ, ಸಿದ್ದು ಬಂಡಗರ, ದಿಲೀಪ ಜಮಾದಾರ, ತಮ್ಮಾಣಿ ನಿಂಗನೂರೆ, ನಾಮದೇವ ಕಾಂಬಳೆ, ಯೂನಸ್ ಅತ್ತಾರ, ಕಿರಣ ಕಾಂಬಳೆ, ಶ್ರವಣ ಕಾಂಬಳೆ, ದಿಲೀಪ ಪಾಯನ್ನವರ, ಇರ್ಫಾನ ಮುಲ್ಲಾ ಸೇರಿದಂತೆ ಇತರರು ಇದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.