ಬೆಳಗಾವಿ: ಇಲ್ಲಿನ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಪುತ್ರ ಮೃಣಾಲ್ ಹೆಬ್ಬಾಳಕರ ಮತ್ತು ಭದ್ರಾವತಿ ಶಾಸಕ ಬಿ.ಕೆ. ಸಂಗಮೇಶ್ವರ ಅವರ ಸಹೋದರ ಬಿ.ಕೆ. ಶಿವಕುಮಾರ್ ಪುತ್ರಿ ಡಾ.ಹಿತಾ ಅವರ ವಿವಾಹ ಗೋವಾದ ಲೀಲಾಪ್ಯಾಲೇಸ್ ರೆಸಾರ್ಟ್‌ನಲ್ಲಿ ಶುಕ್ರವಾರ ಅದ್ಧೂರಿಯಾಗಿ ನೆರವೇರಿತು.
ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ಶಾಸಕರಾದ ಯು.ಟಿ. ಖಾದರ್, ರಿಜ್ವಾನ್ ಅರ್ಷದ್, ಡಾ.ಅಂಜಲಿ ನಿಂಬಾಳ್ಕರ್, ಮುಖಂಡ ಅಶೋಕ ಪಟ್ಟಣ, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಅರುಣ ಕಟಾಂಬಳೆ, ಮಹಾತ್ಮಗಾಂಧಿ ಸೇವಾ ಟ್ರಸ್ಟ್ ಸಂಸ್ಥಾಪಕ ವಿನಯ ಗುರೂಜಿ, ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಮೊದಲಾದವರು ನವ ದಂಪತಿಗೆ ಶುಭ ಕೋರಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.