ADVERTISEMENT

ಕಾಂಗ್ರೆಸ್ ಭವನ ಉದ್ಘಾಟನೆ ಅ.2ರಂದು

​ಪ್ರಜಾವಾಣಿ ವಾರ್ತೆ
Published 30 ಸೆಪ್ಟೆಂಬರ್ 2020, 14:43 IST
Last Updated 30 ಸೆಪ್ಟೆಂಬರ್ 2020, 14:43 IST

ಬೆಳಗಾವಿ: ಇಲ್ಲಿನ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ನೂತನವಾಗಿ ನಿರ್ಮಿಸಿರುವ ಜಿಲ್ಲಾ ಕಾಂಗ್ರೆಸ್‌ ಕಚೇರಿ ‘ಕಾಂಗ್ರೆಸ್ ಭವನ’ದ ಉದ್ಘಾಟನಾ ಸಮಾರಂಭವನ್ನು ಅ.2ರಂದು ಸಂಜೆ 4ಕ್ಕೆ ಹಮ್ಮಿಕೊಳ್ಳಲಾಗಿದೆ.

ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಉದ್ಘಾಟಿಸುವರು. ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಅರ್. ಪಾಟೀಲ, ಕಾರ್ಯಾಧ್ಯಕ್ಷರಾದ ಸತೀಶ ಜಾರಕಿಹೊಳಿ, ಈಶ್ವರ ಖಂಡ್ರೆ, ಶಾಸಕರಾದ ಮಹಾಂತೇಶ ಕೌಜಲಗಿ, ಲಕ್ಷ್ಮಿ ಹೆಬ್ಬಾಳಕರ, ಡಾ.ಅಂಜಲಿ ನಿಂಬಾಳ್ಕರ್‌, ಗಣೇಶ ಹುಕ್ಕೇರಿ, ಮುಖಂಡರು ಮತ್ತು ಮುಂಚೂಣಿ ಘಟಕಗಳ ಪದಾಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ’ ಎಂದು ಜಿಲ್ಲಾ ಘಟಕದ ಅಧ್ಯಕ್ಷ ವಿನಯ ನಾವಲಗಟ್ಟಿ ತಿಳಿಸಿದ್ದಾರೆ.

‘ಅಂದು ಬೆಳಿಗ್ಗೆ 9ಕ್ಕೆ ವಿಮಾನನಿಲ್ದಾಣಕ್ಕೆ ಬರುವ ಗಣ್ಯರು, ಘಟಪ್ರಭಾದ ಕಾಂಗ್ರೆಸ್ ಸೇವಾದಳದ ತರಬೇತಿ ಕೇಂದ್ರಕ್ಕೆ ಭೇಟಿ ಕೊಟ್ಟು ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಬಳಿಕ ಕಾಂಗ್ರೆಸ್ ಭವನದ ಉದ್ಘಾಟನೆ ನಡೆಯಲಿದೆ’ ಎಂದು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.