
ಕಾಂಗ್ರೆಸ್ ಪ್ರತಿಭಟನೆ
ಬೆಳಗಾವಿ: ವಿಕಸಿತ ಭಾರತ– ಉದ್ಯೋಗ ಖಾತ್ರಿ ಮತ್ತು ಜೀವನೋಪಾಯ ಮಿಷನ್(ಗ್ರಾಮೀಣ) (ವಿಬಿ–ಜಿ ರಾಮ್ ಜಿ) ಕಾಯ್ದೆ ವಿರೋಧಿಸಿ, ಇಲ್ಲಿನ ಕಾಂಗ್ರೆಸ್ ಭವನದ ಎದುರು ಭಾನುವಾರ ಬೆಳಿಗ್ಗೆಯಿಂದ ಸಾಂಕೇತಿಕ ಪ್ರತಿಭಟನೆ ಮತ್ತು ಒಂದು ದಿನದ ಉಪವಾಸ ಸತ್ಯಾಗ್ರಹ ಆರಂಭಗೊಂಡಿದೆ.
ಪ್ರತಿಭಟನೆ ನೇತೃತ್ವ ವಹಿಸಿದ ಎಐಸಿಸಿ ಉಸ್ತುವಾರಿ ಕಾರ್ಯದರ್ಶಿ ಗೋಪಿನಾಥ ಪಳನಿಯಪ್ಪನ್, 'ಕಾಂಗ್ರೆಸ್ ಸಾಮರಸ್ಯ, ಶಾಂತಿಗಾಗಿ ಹೋರಾಡುತ್ತಿದ್ದರೆ, ಬಿಜೆಪಿ ದ್ವೇಷದ ರಾಜಕಾರಣ ಮಾಡುತ್ತಿದೆ. ನರೇಗಾ ಯೋಜನೆಯಿಂದ ಗಾಂಧಿ ಹೆಸರು ತೆಗೆದು, ಮತ್ತೊಮ್ಮೆ ಅವರ ಹತ್ಯೆ ಮಾಡಿದೆ. ಇದನ್ನು ವಿರೋಧಿಸಿ ಹೋರಾಟ ಮಾಡುತ್ತಿದ್ದೇವೆ' ಎಂದರು.
'ನರೇಗಾ ಬದಲಿಗೆ ಕೇಂದ್ರ ಜಾರಿಗೆ ತರುತ್ತಿರುವ ಹೊಸ ಕಾಯ್ದೆ ರದ್ದುಪಡಿಸುವವರೆಗೂ ಹೋರಾಟ ನಿಲ್ಲದು. ಈ ಹೋರಾಟವು ಇಡೀ ದೇಶದಲ್ಲಿ ಚಳವಳಿ ರೂಪ ಪಡೆಯಬೇಕಿದೆ' ಎಂದರು.
ಶಾಸಕರಾದ ಮಹಾಂತೇಶ ಕೌಜಲಗಿ, ವಿಶ್ವಾಸ ವೈದ್ಯ, ಬಾಬಾಸಾಹೇಬ ಪಾಟೀಲ, ಆಸಿಫ್ ಸೇಠ್, ಮುಖಂಡರಾದ ವಿನಯ ನಾವಲಗಟ್ಟಿ, ರಾಹುಲ ಜಾರಕಿಹೊಳಿ, ಮೃಣಾಲ್ ಹೆಬ್ಬಾಳಕರ ಮತ್ತಿತರರು ಪಾಲ್ಗೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.