ಐಗಳಿ: ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಐಗಳಿ ಕ್ರಾಸ್ ಪೆಟ್ರೋಲ್ ಬಂಕ್ ಎದುರು ಪ್ರತಿಭಟನೆ ನಡೆಸಿದರು.
ನೇತೃತ್ವ ವಹಿಸಿದ್ದ ತೆಲಸಂಗ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಚಿದಾನಂದ ತಳಕೇರಿ, ‘ಅಂತರರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲ ಬೆಲೆ ಬಾರಿ ಪ್ರಮಾಣದಲ್ಲಿ ಇಳಿಕೆ ಕಂಡಿದ್ದರೂ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಇಳಿಕೆ ಮಾಡುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ. ಅಗತ್ಯ ವಸ್ತುಗಳ ಬೆಲೆಯೂ ಏರಿಕೆ ಆಗಿರುವುದರಿದ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸರ್ಕಾರವು ಜನ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ’ ಎಂದು ದೂರಿದರು.
ಮುಖಂಡ ಬಸವರಾಜ ಬುಟಾಳೆ, ತಾ.ಪಂ. ಸದಸ್ಯ ಸದಾಶಿವ ಹರಪಾಳೆ, ಬಂದೇನಮಾಜ ಮುಜಾವರ, ಅಪ್ಪಾಸಾಬ ಭೀ.ತೆಲಸಂಗ, ಸಂಗಪ್ಪ ಡಂಬಳಿ, ಸೋಮಶೇಖರ ಝರೆ, ತುಕಾರಾಮ ದೇವಖಾತೆ, ಸಂದೀಪ ಕಾಂಬಳೆ, ಅಪ್ಪಾಸಾಬ ಸಿಂಗೆ, ಅಣ್ಣಪ್ಪ ಹಾಲಳ್ಳಿ, ಅಲಿಬಾದಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.