ಚಿಕ್ಕೋಡಿ: ‘ಸಹಕಾರ ತತ್ವಗಳು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನೆರವು ನೀಡುತ್ತವೆ. ಸಹಕಾರ ರಂಗವು ಎಲ್ಲ ವರ್ಗದ ಜನರನ್ನು ಎತ್ತಿ ಹಿಡಿಯುವಲ್ಲಿ ಸಹಕಾರಿಯಾಗಿದೆ. ಇಂತಹ ಕೆಲಸವನ್ನು ಮಾಜಿ ಶಾಸಕ ಕಲ್ಲಪ್ಪ ಮಗೆಣ್ಣವರ ಮಾಡುತ್ತಿರುವುದು ಶ್ಲಾಘನೀಯ’ ಎಂದು ಶ್ರೀಶೈಲ ಪೀಠದ ಚೆನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ತಾಲ್ಲೂಕಿನ ಮಾಂಜರಿ ಗ್ರಾಮದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕೆ.ಪಿ. ಮಗೆಣ್ಣವರ ಲಕ್ಷ್ಮೀ ಕ್ರೆಡಿಟ್ ಸೌಹಾರ್ದ ಸಹಕಾರ ಸಂಘದ 36ನೇ ವಾರ್ಷಿಕ ಸರ್ವಸಾಧಾರಣ ಸಭೆ ಹಾಗೂ ಮಾಜಿ ಶಾಸಕ ಕೆ.ಪಿ.ಮಗೆಣ್ಣವರ 78ನೇ ಜನ್ಮದಿನದ ಅಂಗವಾಗಿ ಹಮ್ಮಿಕೊಂಡಿದ್ದ ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಿ ಮಾತನಾಡಿದರು.
ಸಂಘದ ವಾರ್ಷಿಕ ವರದಿಯನ್ನು ಪ್ರಧಾನ ವ್ಯವಸ್ಥಾಪಕ ಪ್ರದೀಪ ಮಗೆಣ್ಣವರ ವಾಚಿಸಿ, ‘11584 ಸದಸ್ಯರನ್ನೊಳಗೊಂಡ ಸಂಘವು ₹334.24 ಕೋಟಿ ಠೇವಣಿ ಹೊಂದಿದ್ದು, ₹ 177.62 ಕೋಟಿ ಸಾಲ ವಿತರಣೆ ಮಾಡಲಾಗಿದೆ. ಪ್ರಸಕ್ತ ಆರ್ಥಿಕ ವರ್ಷದಲ್ಲಿ ಸಂಘ ₹ 8.78 ಕೋಟಿ ಲಾಭ ಹೊಂದಿದೆ’ ಎಂದರು.
ಸಂಘದ ಅಧ್ಯಕ್ಷ ಸತೀಶ ಮಗೆಣ್ಣವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಪಾಧ್ಯಕ್ಷ ಸದಾಶಿವ ಮಿರ್ಜಿ, ನಿರ್ದೇಶಕರಾದ ಜಿನ್ನಪ್ಪ ಶೇಡಬಾಳೆ, ಅಶೋಕ ಚಿಮಾಯಿ, ನೇಮಿನಾಥ ಪಟ್ಟಣಕುಡೆ, ಅಪ್ಪಾಸಾಹೇಬ ಜಮದಾಡೆ, ಸಂಜಯ ಪಾಟೀಲ, ಇಲಿಯಾಸ್ ಮುಲ್ಲಾ, ಸರಿತಾ ಮಂಗಸೂಳೆ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.