ADVERTISEMENT

ಕೋವಿಡ್-19 ಭೀತಿ | ಜಯಂತಿ ಸರಳ ಆಚರಣೆ: ಜಿಲ್ಲಾಧಿಕಾರಿ ಡಾ.ಎಸ್.ಬಿ. ಬೊಮ್ಮನಹಳ್ಳಿ

​ಪ್ರಜಾವಾಣಿ ವಾರ್ತೆ
Published 18 ಮಾರ್ಚ್ 2020, 15:27 IST
Last Updated 18 ಮಾರ್ಚ್ 2020, 15:27 IST

ಬೆಳಗಾವಿ: ‘ಕೊರೊನಾ ವೈರಾಣು ಸೋಂಕು ಹರಡುತ್ತಿರುವುದರಿಂದಾಗಿ, ಈ ಬಾರಿ ಡಾ.ಬಿ.ಆರ್. ಅಂಬೇಡ್ಕರ್ ಹಾಗೂ ಡಾ.ಬಾಬು ಜಗಜೀವನರಾಂ ಜಯಂತಿಗಳನ್ನು ಸರಳ ರೀತಿಯಲ್ಲಿ ಆಚರಿಸಲಾಗುವುದು. ಪರಿಸ್ಥಿತಿ ನಿಯಂತ್ರಣಕ್ಕೆ ಬಂದಲ್ಲಿ ಪ್ರತಿ ವರ್ಷದಂತೆ ವಿಜೃಂಭಣೆಯಿಂದ ಕಾರ್ಯಕ್ರಮ ಆಯೋಜಿಸಲಾಗುವುದು’ ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ. ಬೊಮ್ಮನಹಳ್ಳಿ ತಿಳಿಸಿದರು.

ಬುಧವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಮೆರವಣಿಗೆ ರದ್ದುಗೊಳಿಸಿ, ಏ. 14ರಂದು ಅಂಬೇಡ್ಕರ್ ಹಾಗೂ ಏ. 5ರಂದು ಡಾ.ಜಗಜೀವನರಾಂ ಜಯಂತಿಯಂದು ಕೇವಲ 40ರಿಂದ 50 ಜನರ ಸಮ್ಮುಖದಲ್ಲಿ ಮಹಾತ್ಮರ ಭಾವಚಿತ್ರಗಳಿಗೆ ಪೂಜೆ ಸಲ್ಲಿಸುವ ಮೂಲಕ ಆಚರಿಸೋಣ’ ಎಂದರು.

ADVERTISEMENT

ದಲಿತ ಮುಖಂಡ ಮಲ್ಲೇಶ ಚೌಗಲೆ, ‘ವಿಶ್ವ ಎದುರಿಸುತ್ತಿರುವ ಸಮಸ್ಯೆಯನ್ನು ನಾವೆಲ್ಲರೂ ಅರಿತುಕೊಳ್ಳಬೇಕಿದೆ’ ಎಂದು ಹೇಳಿದರು.

ಪೊಲೀಸ್ ಆಯುಕ್ತ ಬಿ.ಎಸ್. ಲೋಕೇಶ್ ಕುಮಾರ್, ಹೆಚ್ಚುವರಿ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕಿ ಡಾ.ಉಮಾ ಸಾಲಿಗೌಡರ, ಮಹಾನಗರ ಪಾಲಿಕೆ ಆಯುಕ್ತ ಕೆ.ಎಚ್. ಜಗದೀಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ವಿದ್ಯಾವತಿ ಭಜಂತ್ರಿ, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.