ಖಾನಾಪುರ (ಬೆಳಗಾವಿ ಜಿಲ್ಲೆ): ತಾಲ್ಲೂಕಿನ ಹಲಸಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೋವಿಡ್–19 ಸೋಂಕಿತೆಗೆ ಅಲ್ಲಿನ ಸಿಬ್ಬಂದಿ ಯಶಸ್ವಿಯಾಗಿ ಹೆರಿಗೆ ಮಾಡಿಸಿದ್ದಾರೆ.
ತಾಲ್ಲೂಕಿನ ಹಲಗಾ ಗ್ರಾಮದ ಮಹಿಳೆ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ‘ಶನಿವಾರ ರಾತ್ರಿ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡಿತ್ತು. ನರ್ಸ್ ರಾಣಿ ಲಖನಗೌಡ ಅವರು ಪಿಪಿಇ ಕಿಟ್ ಧರಿಸಿಕೊಂಡು ವೈದ್ಯ ಡಾ.ಮಂಜುನಾಥ ದಳವಾಯಿ ಅವರು ಮೊಬೈಲ್ ಫೋನ್‌ನಲ್ಲಿ ನೀಡಿದ ಮಾರ್ಗದರ್ಶನದಂತೆ ಹೆರಿಗೆ ಮಾಡಿಸಿಕೊಂಡಿದ್ದಾರೆ. ತಾಯಿ–ಮಗು ಇಬ್ಬರೂ ಆರೋಗ್ಯವಾಗಿದ್ದಾರೆ. ಮಹಿಳೆಯು ಹಿಂದೆ ಅದೇ ಆಸ್ಪತ್ರೆಯಲ್ಲಿ ಮೂರು ಮಕ್ಕಳಿಗೆ ಜನ್ಮ ನೀಡಿದ್ದರು’ ಎಂದು ಟಿಎಚ್‌ಒ ಡಾ.ಸಂಜಿವ ನಾಂದ್ರೆ ತಿಳಿಸಿದರು.
‘ಸೋಂಕಿತೆಗೆ ಧೈರ್ಯ ತುಂಬಿ ಹೆರಿಗೆ ಮಾಡಿಸಿದ ವೈದ್ಯಕೀಯ ಸಿಬ್ಬಂದಿ ಕಾರ್ಯ ಶ್ಲಾಘನೀಯ’ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಟ್ವೀಟ್ ಮಾಡಿ ಅಭಿನಂದಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.